Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ₹30 ಕೋಟಿ ವೆಚ್ಚದಲ್ಲಿ ಪಟ್ಟಣದ ಸಮಗ್ರ ಅಭಿವೃದ್ದಿ; ನರೇಂದ್ರಸ್ವಾಮಿ

ಪ್ರಸಕ್ತ ವರ್ಷದಲ್ಲಿ ಸುಮಾರು 30 ಕೋಟಿ ಅನುದಾನದಲ್ಲಿ ಪಟ್ಟಣವನ್ನು ಸಮಗ್ರವಾಗಿ ಅಭಿವೃದ್ದಿಪಡಿಸಲಾಗುವುದು ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.

ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯ 4ನೇ ಹಂತದ ಮೂರು ಕೋಟಿ ರೂ ವೆಚ್ಚದಲ್ಲಿ ಮಳವಳ್ಳಿ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿನ ವಿವಿಧ ವಾರ್ಡ್ಗಳಲ್ಲಿ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿದ ನಂತರ ಮಾತನಾಡಿದ ಅವರು, ಪೌರಾಡಳಿತ ಸಚಿವರಿಗೆ ಮನವಿ ಮೇರೆಗೆ ವಿಶೇಷ ಅನುದಾನ ನೀಡಿದ್ದಾರೆ, ಇಂದು ಸುಮಾರು ಮೂರು ಕೋಟಿರೂ ಹೆಚ್ಚು ಅನುದಾನದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿದೆ, ವಿಶೇಷ ಅನುದಾಡಿಯಲ್ಲಿ ಒಳಚರಂಡಿ ಕಾಮಗಾರಿಗೆ 10 ಕೋಟಿ ಜೊತೆಗೆ ಸದ್ಯದಲ್ಲಿಯೇ 5 ಕೋಟಿ ರೂ ಅನುದಾನ ಬಿಡುಗಡೆಯಾಗಲಿದೆ, ಪ್ರಸಕ್ತ ವರ್ಷದಲ್ಲಿ ಸುಮಾರು 30 ಕೋಟಿ ಅನುದಾನದಲ್ಲಿ ಪಟ್ಟಣವನ್ನು ಸಮಗ್ರವಾಗಿ ಅಭಿವೃದ್ದಿಪಡಿಸಲಾಗುವುದು ಎಂದರು.

ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಅಂತಿಮಗೊಳ್ಳುವ ಮೊದಲೇ ಪುರಸಭೆ ಆಡಳಿತ ಮಂಡಳಿ ಇಲ್ಲದ ಸಂದರ್ಭದಲ್ಲಿ ಪುರಸಭೆಗೆ ಹಸ್ತಾಂತರ ಮಾಡಿ ಯೋಜನೆಯು ಹಳ್ಳ ಹಿಡಿಯುವಂತೆ ಮಾಡಲಾಗಿತ್ತು. ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿ ಯೋಜನೆಯನ್ನು ಸರಿಪಡಿಸುವಂತೆ ತಾಕೀತು ಮಾಡಿದ್ದರಿಂದ ಗುತ್ತಿಗೆದಾರ ಕಾಮಗಾರಿಯನ್ನು ಅಂತಿಮಗೊಳಿಸಿದ್ದಾರೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನದ ಜಿಲ್ಲಾಧ್ಯಕ್ಷ ಚಿಕ್ಕಲಿಂಗಯ್ಯ, ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ಉಪಾಧ್ಯಕ್ಷ ಬಸವರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಪಿ.ರಾಜು, ದೊಡ್ಡಯ್ಯ, ದೇವರಾಜು, ಪುರಸಭೆ ಸದಸ್ಯರಾದ ಶಿವಸ್ವಾಮಿ, ಪ್ರಮೀಳ, ನೂರುಲ್ಲ, ಸಿದ್ದರಾಜು ಸವಿತ ಕೃಷ್ಣ, ನಾಮ ನಿರ್ದೇಶಕರಾದ ಆನಂದ, ಬಸವರಾಜು, ಮಾರೇಹಳ್ಳಿ ಬಸವರಾಜು, ಸಂತೋಷ್, ಮುಖಂಡರಾದ ಅಂಬರೀಶ್, ಮಲ್ಲಯ್ಯ, ಮಹಾದೇವ, ಬಸವರಾಜು, ಕಿರಣ್ ಶಂಕರ್ ಮುಖ್ಯಾಧಿಕಾರಿ ನಾಗರತ್ನ, ಲೋಕಪಯೋಗಿ ಇಲಾಖೆ ಎಇ ಸೋಮಶೇಖರ್ ಸೇರಿದಂತೆ ಇತರರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ