Thursday, November 19, 2026

ಪ್ರಾಯೋಗಿಕ ಆವೃತ್ತಿ

ಕಿಸಾನ್ ಸಮ್ಮಾನ್ ಯೋಜನೆಯ ರಾಜ್ಯದ ಪಾಲು ಕಡಿತ ಮಾಡದಿರಲು ಒತ್ತಾಯ

ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯ ಸರ್ಕಾರ ವಾರ್ಷಿಕವಾಗಿ ರಾಜ್ಯದ ಸಣ್ಣ ಹಿಡುವಳಿ ಕೃಷಿ ಕುಟುಂಬದವರಿಗೆ ನೀಡುತ್ತಿದ್ದ 4 ಸಾವಿರ ರೂ.ನೆರವು ಸ್ಥಗಿತಗೊಳಿಸುವ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ವರಿಯಾಗಿದ್ದು, ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ಸರ್ಕಾರ ರದ್ದುಗೊಳಿಸಬಾರದು ಎಂದು ಮೈಷುಗರ್ ಕಬ್ಬು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಎಸ್.ಎಂ.ವೇಣುಗೋಪಾಲ್ ಆಗ್ರಹಿಸಿದರು.

ಜಾಹೀರಾತು

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆಯಡಿ ಕೇಂದ್ರ ಸರ್ಕಾರ ₹6000 ಸಾವಿರ ಹಾಗೂ ರಾಜ್ಯ ಸರ್ಕಾರ ₹4000 ಸೇರಿ ಒಟ್ಟು 10 ಸಾವಿರ ರೂ.ಗಳನ್ನು ಸಣ್ಣ ಹಿಡುವಳಿದಾರರಿಗೆ ನೀಡಲಾಗುತ್ತಿತ್ತು. ಇದನ್ನು ಮುಂದುವರಿಸಬೇಕು, ಇಲ್ಲವಾದಲ್ಲಿ ರೈತರಿಗೆ ತೊಂದರೆಯಾಗುತ್ತದೆ ಎಂದರು.

ಇಂದಿನ ದುಬಾರಿ ವ್ಯವಸಾಯದ ಖರ್ಚು ವೆಚ್ಚಗಳಿಗೆ ಕಿಸಾನ್ ಸಮ್ಮಾನ್ ಯೋಜನೆ  ತಕ್ಕಮಟ್ಟಿಗೆ ಆರ್ಥಿಕ ಅನುಕೂಲ ನೀಡುತ್ತಿತ್ತು, ಇತ್ತೀಚೆಗೆ ರಾಜ್ಯಸರ್ಕಾರವು ಈ ಯೋಜನೆಯನ್ನು ಕಡಿತಗೊಳಿಸುವ ಬಗ್ಗೆ ಮುನ್ಸೂಚನೆಯನ್ನು ಕೊಟ್ಟಿದ್ದು, ಒಂದು ವೇಳೆ ಈ ಯೋಜನೆಯನ್ನು ಕೈ ಬಿಟ್ಟರೇ, ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಕೀಲಾರ ಎಸ್.ಕೃಷ್ಣ ಮುಖಂಡರಾದ ಶ್ರೀನಿವಾಸ್, ತುಳಸೀಧರ್ ಸೇರಿದಂತೆ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ