Thursday, September 19, 2024

ಪ್ರಾಯೋಗಿಕ ಆವೃತ್ತಿ

ಸಿಎಂ ಬಗ್ಗೆ ಅವಹೇಳನಕಾರಿ ಹೇಳಿಕೆಗೆ ಬಿಜೆಪಿ ಖಂಡನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಹೇಳಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಬಸರಾಜ ಬೊಮ್ಮಾಯಿ ಅವರನ್ನು ನಾಯಿಗೆ ಹೋಲಿಕೆ ಮಾಡಿ ಮಾತನಾಡುವುದು ಸಿದ್ದರಾಮಯ್ಯ ಅವರ ಘನತೆಗೆ ಸರಿಯಾಗಿದದ್ದಲ್ಲ, ಟೀಕೆಗಳು ಆರೋಗ್ಯಕರವಾಗಿರಬೇಕು, ವೈಯಕ್ತಿಕವಾಗಿರಬಾರದು ಎಂದರು.

ಬಿಜೆಪಿ ಮುಖಂಡ ಆಶೋಕ್ ಜಯರಾಂ ಮಾತನಾಡಿ, ಯೋಗಿ ಆದಿತ್ಯನಾಥ ಅವರ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಅವಹೇಳನಕಾರಿಯಾಗಿ ಮಾತನಾಡಿರುವುದು ಸರಿಯಲ್ಲ, ಯಾವುದೇ ವ್ಯಕ್ತಿಯ ಖಾಸಗಿತನದ ಬಗ್ಗೆ ಮಾತನಾಡುವುದು ಶೋಭೆ ತರುವುದಿಲ್ಲ, ಇಂತಹ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ವಿವೇಕ್, ವಸಂತಕುಮಾರ್, ಸಿ.ಟಿ.ಮಂಜುನಾಥ್, ನಾಗಾನಂದ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!