Saturday, November 21, 2026

ಪ್ರಾಯೋಗಿಕ ಆವೃತ್ತಿ

ಜಿ.ಪರಮೇಶ್ವರ್‌ ಏಳಿಗೆ ಸಹಿಸದೇ ಬಿಜೆಪಿಯಿಂದ ಇಡಿ ದಾಳಿ : ದೀಪಕ್ ಖಂಡನೆ

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಶೈಕ್ಷಣಿಕ ಸಂಸ್ಥೆಗಳ ಮೇಲೆ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತ ಇ.ಡಿ. ದಾಳಿ ನಡೆಸಿರುವುದು ಖಂಡನೀಯ ಎಂದು ಕೆಪಿಸಿಸಿ ಪ.ಜಾತಿ ವಿಭಾಗದ ಜಿಲ್ಲಾ ಮಾಧ್ಯಮ ವಕ್ತಾರ ಕೆ.ಎನ್.ದೀಪಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿ.ಪರಮೇಶ್ವರ್ ಅವರ ರಾಜಕೀಯ ಉನ್ನತಿ ಸಹಿಸದ ಕೇಂದ್ರ ಸರ್ಕಾರ ಶೈಕ್ಷಣಿಕ ಸಂಸ್ಥೆಗಳ ಮೇಲೆ ರಾಜಕೀಯ ದುರುದ್ದೇಶದಿಂದ ಅನಗತ್ಯವಾಗಿ ಇ.ಡಿ. ದಾಳಿ ನಡೆಸಿದ್ದು, ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.

ಕಳೆದ ಐವತ್ತು ವರ್ಷಗಳಿಂದ ವಿದ್ಯಾರ್ಥಿ ವಸತಿ ನಿಲಯ, ಮೆಡಿಕಲ್, ಇಂಜಿನಿಯರಿಂಗ್, ಡೆಂಟಲ್, ನರ್ಸಿಂಗ್, ಪಾಲಿಟೆಕ್ನಿಕ್ ಕಾಲೇಜು ಆರಂಭಿಸಿ ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಶ್ರಮಿಸುತ್ತಿದ್ದಾರೆ. ಅನೇಕ ಬಡ ವಿದ್ಯಾರ್ಥಿಗಳ ಜೀವನಕ್ಕೂ ಭದ್ರ ಬುನಾದಿ ಹಾಕಿದ್ದಾರೆ ಎಂಬುದು ಕೇಂದ್ರ ಸರ್ಕಾರಕ್ಕೆ ಗೊತ್ತಿದ್ದರೂ ದುರುದ್ದೇಶದ ದಾಳಿ ನಡೆಸಿರುವುದು ಅತ್ಯಂತ ಖಂಡನೀಯ. ಈಗಾಗಲೇ ಸುಪ್ರೀಂಕೋರ್ಟ್ ಕೂಡ ಜಾರಿ ನಿರ್ದೇಶನಾಲಯ ಮಿತಿಮೀರಿ ನಡೆದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಎಂದರೆ ಜಾರಿ ನಿರ್ದೇಶನಾಲಯವು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ ಎಂಬುದು ಸ್ಪಷ್ಟವಾಗುತ್ತಿದೆ. ಪರಮೇಶ್ವರ್ ಅವರು ರಾಜ್ಯದ ದಲಿತ ಸಮುದಾಯದ ಪ್ರಭಾವಿ ನಾಯಕರು, ಸಿಎಂ ರೇಸ್‌ನಲ್ಲಿರುವ ಪ್ರಮುಖರಾಗಿದ್ದಾರೆ. ಆದ್ದರಿಂದ ಅವರ ಒಡೆತನದ ಶೈಕ್ಷಣಿಕ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಪರಮೇಶ್ವರ ಅವರು ದಲಿತ ಎಂಬ ಕಾರಣಕ್ಕೆ ಈ ದಾಳಿ ನಡೆದಿದ್ದು, ಅವರನ್ನು ರಾಜಕೀಯವಾಗಿ ಹಣಿಯಬೇಕೆಂಬ ದುರುದ್ದೇಶದಿಂದ ಕೇಂದ್ರ ಸರ್ಕಾರ ಕುತಂತ್ರದ ರಾಜಕಾರಣ ಮಾಡುತ್ತಿದೆ ಎಂದು ಖಂಡಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ