Friday, September 20, 2024

ಪ್ರಾಯೋಗಿಕ ಆವೃತ್ತಿ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ| ಉದ್ಯಮಿಗಳ ವಿರೋಧಕ್ಕೆ ಕನ್ನಡಸೇನೆ ಖಂಡನೆ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ತರಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಾಸಗಿ ಕಂಪನಿಗಳ ಮಾಲೀಕರು ವಿರೋಧಿಸಿರುವುದಕ್ಕೆ ಕನ್ನಡಸೇನೆ ಮಂಡ್ಯ ಜಿಲ್ಲಾಧ್ಯಕ್ಷ ಹೆಚ್.ಸಿ.ಮಂಜುನಾಥ್ ಖಂಡನೆ ವ್ಯಕ್ತಪಡಿಸಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ ‘ಸಿ’ ಮತ್ತು ‘ಡಿ’ ದರ್ಜೆಯ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಡ್ಡಾಯಗೊಳಿಸುವ ವಿಧೇಯಕಕ್ಕೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿತ್ತು. ಆದರೆ ಖಾಸಗಿ ಉದ್ಯಮಿಗಳಿಂದ ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ವಿರೋಧಿಸುವವರನ್ನು ಕನ್ನಡ ಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದರು.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸುವ ವಿಧೇಯಕ ವಿಧಾನ ಮಂಡಲದ ಉಭಯದ ಅಧಿವೇಶನಗಳಲ್ಲಿ ಅಂಗೀಕಾರವಾಗಬೇಕಾಗಿದೆ. ಮೂರು ಪಕ್ಷಗಳ ಜನಪ್ರತಿನಿಧಿಗಳು ಸರ್ವಾನುಮತದಿಂದ ಈ ವಿಧೇಯಕವನ್ನು ಅನುಮೋದಿಸಿ ಅಂಗೀಕಾರ ನೀಡಬೇಕು. ಕನ್ನಡಿಗರ ಬಹುದಿನದ ಡಾ.ಸರೋಜಿನಿ ಮಹಿಷಿ ವರದಿಗಾಗಿ ರಾಜ್ಯದಾದ್ಯಂತ ಕನ್ನಡ ಸೇನೆ ಮತ್ತು ಹಲವಾರು ಕನ್ನಡಪರ ಸಂಘಟನೆಗಳು ಹೋರಾಟ ಮಾಡಿಕೊಂಡು ಬಂದಿದವೆ ಎಂದು ತಿಳಿಸಿದರು.

ಕೆಲ ಕಾಪೋರೇಟ್ ವಲಯದ ಪ್ರಚಾರ ಪ್ರಿಯರು ಉದ್ಯಮಿಗಳು ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕಕ್ಕೆ ವಿರೋಧ ಮಾಡುತ್ತಿದ್ದಾರೆ. ಇಂತಹ ಕೂಗುಮಾರಿಗಳಿಗೆ ಸರ್ಕಾರ ಕವಡೆ ಕಾಸಿನ ಕಿಮ್ಮತ್ತು ನೀಡಬಾರದು. ರಾಜ್ಯದ ಮುಖ್ಯಮಂತ್ರಿಗಳು ಕರ್ನಾಟಕ ಕಾವಲುಪಡೆ ಅಧ್ಯಕ್ಷರಾಗಿ ರಾಜಕೀಯಕ್ಕೆ ಬಂದಂತಹ ನಾಯಕರಾಗಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಎಷ್ಟು ತಾಂಡವವಾಡುತ್ತಿದೆ. ಇದನ್ನು ಮನಗಂಡು ತಮ್ಮ ಸರ್ಕಾರ ಡಾ. ಸರೋಜಿನಿ ಮಹಿಷಿ ವರದಿ ಜಾರಿ ಮಾಡಲು ಮುಂದಾಗಿರುವುದು ಸ್ವಾಗತಾರ್ಹ, ಇದನ್ನು ಮುಂದವರಿಸಬೇಕೆಂದು ಆಗ್ರಹಿಸಿದರು.

ಖಾಸಗಿ ವಲಯದ ಮಾಲೀಕರು, ಕಾರ್ಪೋರೇಟ್ ವ್ಯಾಪಾರಿಗಳು ಕರ್ನಾಟಕಕ್ಕೆ ಬಂದ ನಂತರ ಈ ನೆಲದ ಕಾನೂನು, ಸಂಸ್ಕೃತಿ, ಜನರ ಬದುಕನ್ನು ಮತ್ತು ಆಡಳಿತ ಭಾಷೆಯನ್ನು ಗೌರವಿಸುವುದನ್ನು ಕಲಿಯಬೇಕು. ಕನ್ನಡಿಗರ ಉದ್ಯೋಗ ಮೀಸಲಾತಿ ವಿಧೇಯಕ ಕುರಿತಾಗಿ ಅಪಸ್ವರ ಎತ್ತುತ್ತಿರುವುದನ್ನು ನಿಲ್ಲಿಸಲಿದ್ದಾರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆಂದು ಎಚ್ಚರಿಕೆ ನೀಡಿದರು.

ಗೋಷ್ಠಿಯಲ್ಲಿ ರಾಜ್ಯ ಸಂಚಾಲಕ ಜಿ ಮಹಾಂತಪ್ಪ, ಜಿಲ್ಲಾ ಮಹಿಳಾ ಅಧ್ಯಕ್ಷರಾದ ಸೌಭಾಗ್ಯ, ಜಿಲ್ಲಾ ಕಾರ್ಯದರ್ಶಿ ಮಂಡಿಬೆಟ್ಟಳ್ಳಿ ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಮ್ಮನಾಯಕನಹಳ್ಳಿ ಕೇಬಲ್ ಮಂಜು, ತಾಲೂಕು ಅಧ್ಯಕ್ಷ ಸತೀಶ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!