Wednesday, November 18, 2026

ಪ್ರಾಯೋಗಿಕ ಆವೃತ್ತಿ

ಚಿತ್ತಾಪುರದಲ್ಲಿ ಆರೆಸ್ಸೆಸ್ ಮೆರವಣಿಗೆಗೆ ಷರತ್ತುಬದ್ಧ ಅನುಮತಿ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ.

ನವೆಂಬರ್ 16ರ‌ ಭಾನುವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರ ತನಕ ಗಣವೇಷಧಾರಿಗಳ ಪಥಸಂಚಲನ‌ಕ್ಕೆ ಹೈಕೋರ್ಟ್ ಅವಕಾಶ ನೀಡಿದೆ.

ಈ ಸಂಬಂಧ ಅರ್ಜಿ‌ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ‌ಪೀಠದ ನ್ಯಾಯಮೂರ್ತಿ ಎಂ.ಜಿ.ಎಸ್ ಕಮಲ್ ಅವರಿದ್ದ ಏಕ ಸದಸ್ಯ ನ್ಯಾಯಪೀಠವು, ‘ಪಥಸಂಚಲನದಲ್ಲಿ 300 ಮಂದಿ ಗಣವೇಷಧಾರಿಗಳು ಹಾಗೂ 50 ಮಂದಿ ಘೋಷ್ ವೃಂದಕ್ಕೆ ಅವಕಾಶ ನೀಡಲಾಗಿದೆ’ ಎಂದು ಆದೇಶ ನೀಡಿ ಅರ್ಜಿ‌ಯನ್ನು ಇತ್ಯರ್ಥಗೊಳಿಸಿದ್ದಾರೆ.

ಕಳೆದ ಅಕ್ಟೋಬರ್ 19ರಂದು ಚಿತ್ತಾಪುರದಲ್ಲಿ RSS ಪಥಸಂಚಲನ ನಡೆಸಲು ಅನುಮತಿ ಕೋರಿತ್ತು. ಆದರೆ, ಇನ್ನೆರಡು ಸಂಘಟನೆಗಳು ಅದೇ ದಿನ ಅನುಮತಿ ‌ಕೋರಿದ್ದರಿಂದ ಚಿತ್ತಾಪುರ ತಹಶೀಲ್ದಾರ್ ಅನುಮತಿ ‌ನಿರಾಕರಿಸಿದ್ದರು. ಅದನ್ನು ಪ್ರಶ್ನಿಸಿ ಆರ್‌ಎಸ್‌ಎಸ್ ಜಿಲ್ಲಾ ಸಂಘಚಾಲಕ ಅಶೋಕ ಪಾಟೀಲ ಹೈಕೋರ್ಟ್‌ ಮೊರೆಹೋಗಿದ್ದರು.

ಕೃಪೆ : ನಾನು ಗೌರಿ.ಕಾಂ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ