Wednesday, November 18, 2026

ಪ್ರಾಯೋಗಿಕ ಆವೃತ್ತಿ

ವಿದೇಶಕ್ಕೆ ತೆರಳಲು ಸಿ.ಎಸ್.ಪುಟ್ಟರಾಜುಗೆ ಷರತ್ತುಬದ್ದ ಅನುಮತಿ

ಮಂಡ್ಯ ನಗರಾಭಿವೃದ್ದಿ ಪ್ರಾಧಿಕಾರದ 107 ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಮೇಲುಕೋಟೆ ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಅವರಿಗೆ ಸಿಬಿಐ ನ್ಯಾಯಾಲಯ ವಿದೇಶಕ್ಕೆ ತೆರಳಲು ಷರತ್ತುಬದ್ದ ಅನುಮತಿ ನೀಡಿದೆ.

2009ರಲ್ಲಿ ನಡೆದಿದ್ದ 107 ಸೈಟ್ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲಾಗಿತ್ತು. ಈ ಸಂಬಂಧ 24 ಜನರ ವಿರುದ್ಧ ಸಿಬಿಐ ದೋಷಾರೋಪ ಪಟ್ಟಿ ಸಿದ್ಧಪಡಿಸಿ, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿತ್ತು.

ಈ ಹಿಂದೆ ಸಿ ಎಸ್ ಪುಟ್ಟರಾಜುರವರು ವಿದೇಶಕ್ಕೆ ತೆರಳಲು ಸಿಬಿಐ ನ್ಯಾಯಾಲಯ ಅನುಮತಿ ನಿರಾಕರಿಸಿತ್ತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ