Friday, June 21, 2024

ಪ್ರಾಯೋಗಿಕ ಆವೃತ್ತಿ

ದ್ವಾರಕೀಶ್ ನಿಧನಕ್ಕೆ ಸಚಿವ ಚಲುವರಾಯಸ್ವಾಮಿ, ಸ್ಟಾರ್ ಚಂದ್ರು ಸಂತಾಪ

ಕನ್ನಡ ಚಿತ್ರ ರಂಗದ ಜನಪ್ರಿಯ ನಟ, ನಿರ್ದೇಶಕ ,ನಿರ್ಮಾಪಕ ದ್ವಾರಕೀಶ್ ಅವರ ನಿಧನಕ್ಕೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಹಾಗೂ ಮಂಡ್ಯ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ದ್ವಾರಕೀಶ್ ಅವರು ಚಂದನವನದ ಅತ್ಯಂತ ಪ್ರತಿಭಾವಂತ ನಟ , ನಿರ್ಮಪಕ‌, ನಿರ್ದೇಶಕ, ಚಿತ್ರ ಸಾಹಿತಿ ,
ಕನ್ನಡದ ಕುಳ್ಳ ಎಂದೇ ಖ್ಯಾತರಾದ ದ್ವಾರಕೀಶ್ ಅವರ ಅಗಲಿಕೆಯಿಂದ ಕನ್ನಡ ಚಲನ ಚಿತ್ರರಂಗದ ಧೃವತಾರೆಯೊಂದು ಮರೆಯಾದಂತಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ದ್ವಾರಕೀಶ್ ಒಬ್ಬರು ಅತ್ಯಂತ ಅಪರೂಪದ ಕಲಾವಿದರಾಗಿದ್ದು, ಹೊಸ ಹೊಸ ಪ್ರಯೋಗಗಳ ಮೂಲಕ
ಕನ್ನಡ ಚಿತ್ರರಂಗದ ಎಳಿಗೆಗೆ ದೊಡ್ಡ ಕೊಡುಗೆ ನೀಡಿದ್ದಾರೆ. ನಟನೆಯ ಜೊತೆಗೆ ಅವರು ನಿರ್ಮಿಸಿ ,ನಿರ್ದೇಶಿಸಿದ ಸಿನಿಮಾಗಳು ಕನ್ನಡ ಚಿತ್ರಗಳಿಗೆ ಹೊಸ ಆಯಾಮ ನೀಡಿದವು.ಅವರೊಬ್ಬ ಪ್ರಚಂಡ ಕುಳ್ಳನೇ ಆಗಿದ್ದರು ಎಂದು ಸಚಿವರು ಬಣ್ಣಿಸಿದ್ದಾರೆ.

ಮೃತರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ. ಅವರ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಚಿವರಾದ ಚಲುವರಾಯ ಸ್ವಾಮಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಟಾರ್ ಚಂದ್ರು ಸಂತಾಪ

ಕನ್ನಡ ಚಿತ್ರರಂಗದ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರ ನಿಧನಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಸಂತಾಪ ವ್ಯಕ್ತಪಡಿಸಿದ್ದಾರೆ.

ವರನಟ ಡಾ. ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಸೇರಿದಂತೆ ಕನ್ನಡ ಚಿತ್ರರಂಗದ ಎಲ್ಲಾ ದಿಗ್ಗಜರೊಂದಿಗೆ ನಟಿಸುವುದರ ಜೊತೆಗೆ ಕನ್ನಡಕ್ಕೆ ಅತ್ಯುತ್ತಮ ಚಿತ್ರಗಳನ್ನು ನಿರ್ಮಿಸಿ ಕನ್ನಡ ಚಿತ್ರರಂಗವನ್ನು ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಒಬ್ಬರು ಎಂದು ತಿಳಿಸಿದ್ದಾರೆ.

ನೂರಾರು ಚಿತ್ರಗಳಲ್ಲಿ ನಟಿಸಿ ಜನಮನ ಗೆದ್ದಿದ್ದ ದ್ವಾರಕೀಶ್ ಅವರ ನಿಧನ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಡ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಸಂತಾಪ ವ್ಯಕ್ತಪಡಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!