Friday, November 20, 2026

ಪ್ರಾಯೋಗಿಕ ಆವೃತ್ತಿ

‘ನನ್ನ ರಾಜಕೀಯ ಬೆಳವಣಿಗೆಯ ಪ್ರತೀ ಹೆಜ್ಜೆಯಲ್ಲಿ ಮಾರ್ಗದರ್ಶಕರಾಗಿದ್ದರು’ ; ಕಂಬನಿ ಮಿಡಿದ ಡಿ.ಕೆ.ಶಿವಕುಮಾರ್

ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ. ಕೃಷ್ಣ ಅವರ ನಿಧನದಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಕರ್ನಾಟಕದ ಪ್ರಗತಿಗೆ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ನನ್ನ ರಾಜಕೀಯ ಬೆಳವಣಿಗೆಗೂ ಸೂಕ್ತ ಮಾರ್ಗದರ್ಶನ ‌ನೀಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಂಬನಿ ಮಿಡಿದಿದ್ದಾರೆ.

ನನ್ನ ರಾಜಕೀಯ ಬೆಳವಣಿಗೆಯ ಪ್ರತೀ ಹೆಜ್ಜೆಯಲ್ಲಿ ಮಾರ್ಗದರ್ಶಕರಾಗಿ ನಿಂತವರು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ.ಕೃಷ್ಣ ಅವರು. ಕಾಲಾನಂತರ ನಾವು ಒಂದು ಕುಟುಂಬವಾಗುತ್ತಿದ್ದಂತೆ ನಮ್ಮ ನಡುವಿನ ಬಂಧವು ಮತ್ತಷ್ಟು ಗಟ್ಟಿಯಾಯಿತು. ಅವರ ಜೊತೆ ಪಾಲ್ಗೊಂಡ ಕಾರ್ಯಕ್ರಮವೊಂದರ ಚಿತ್ರವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು

ಎಸ್.ಎಂ ಕೃಷ್ಣ ಅವರ ಸದಾಶಿವನಗರ ನಿವಾಸಕ್ಕೆ ಡಿಕೆ ಶಿವಕುಮಾರ್ ಅವರು ಇಂದು ಭೇಟಿ ಅಂತಿಮ ದರ್ಶನ ಪಡೆದ ಅವರು, ನನ್ನ ರಾಜಕೀಯ ಮಾರ್ಗದರ್ಶಿಗಳಾಗಿದ್ದ ಕೃಷ್ಣ ಅವರ ಜೊತೆ ಕಳೆದ ನೆನಪುಗಳು ಸ್ಮೃತಿಪಟಲದಲ್ಲಿ ಹಾದುಹೋದವು. ಅವರ ದೂರದೃಷ್ಟಿಯ ‌ನಾಯಕತ್ವ ಹಾಗೂ ಕರ್ನಾಟಕಕ್ಕೆ ನೀಡಿದ ಕೊಡುಗೆಗಳು ಅವಿಸ್ಮರಣೀಯ ಎಂದು ಸ್ಮರಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ