Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜೂ.18ಕ್ಕೆ ಸಾಮಾಜಿಕ ನ್ಯಾಯಕ್ಕಾಗಿ ಸಂಘರ್ಷ ರ್‍ಯಾಲಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ದಲಿತ ಚಳುವಳಿಯ ಸಂಸ್ಥಾಪಕ ಸ್ವಾಭಿಮಾನಿ ಮತ್ತು ಕ್ರಾಂತಿಕಾರಿ ನಾಯಕ ಪ್ರೊ.ಬಿ.ಕೃಷ್ಣಪ್ಪರವರ 86ನೇ ಜನ್ಮದಿನೋತ್ಸವ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ ದುರಾಡಳಿತ ವ್ಯವಸ್ಥೆಯನ್ನು ಖಂಡಿಸಿ ಜೂನ್ 18ರಂದು ‘ಸಾಮಾಜಿಕ ನ್ಯಾಯಕ್ಕಾಗಿ ಸಂಘರ್ಷ ರ್‍ಯಾಲಿ’ಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗೀಯ ಸಂಚಾಲಕ ಕೆಎಂ ಅನಿಲ್ ಕುಮಾರ್ ತಿಳಿಸಿದರು.

ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 18ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯ ನಗರದ ಸಂಜಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಮೆರವಣಿಗೆ ನಡೆಸಿ ನಂತರ ಬಹಿರಂಗ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಅಂದಿನ ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಉದ್ಘಾಟಿಸಲಿದ್ದು, ವಿಚಾರವಾದಿ ಡಾ.ತುಕಾರಾಂ ಅವರು ಪ್ರೊ. ಬಿ ಕೃಷ್ಣಪ್ಪ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಜನಾರ್ಧನ ಬಾಬು, ರಂಗನಾಥ್, ಮುನಿರಾಜ್, ನಾಗೇಶ್, ಭಾಗ್ಯಮ್ಮ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು.

ಅಂದು ನಡೆಯುವ ಸಭೆಯಲ್ಲಿ ಕಾಂತರಾಜ್ ಆಯೋಗದ ವರದಿ ಬಿಡುಗಡೆ, ಜಾತಿ ಜನಸಂಖ್ಯಾ ವಾರು ಮೀಸಲಾತಿ ಜಾರಿ ,ದೌರ್ಜನ್ಯ ,ಅತ್ಯಾಚಾರ ತಡೆಯಲು ಕಠಿಣ ಕ್ರಮ, ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ಮಕ್ಕಳಿಗೆ ಸರ್ಕಾರದಿಂದ ಶುಲ್ಕ ಭರಿಸಲು ಆದೇಶ, ದಲಿತ ಹಿಂದುಳಿದ ಮತ್ತು ಅಲ್ಪ ಸಂಖ್ಯಾತರ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು, ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ, ಹೊರಗುತ್ತಿಗೆ ಪದ್ಧತಿ ರದ್ದು ಮಾಡುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡಿಸಲಾಗುವುದು ಎಂದರು.

ಗೋಷ್ಠಿಯಲ್ಲಿ ಸುರೇಶ್, ರಾಜು, ಆನಂದ್ ,ರಂಗಸ್ವಾಮಿ, ಮರಂಕಯ್ಯ ಸೇರಿದಂತೆ ಇತರದಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ