Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜೂ.6ಕ್ಕೆ ನಾಲ್ವಡಿ ಜಯಂತಿ : ಚಲುವರಾಯಸ್ವಾಮಿ ಅಭಿನಂದನೆ

ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತ್ಯುತ್ಸವ ಹಾಗೂ ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯ ಮಂಜೂರು ಮಾಡಿಸಿದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭವನ್ನು ಜೂ.6ರಂದು ಬೆಳಿಗ್ಗೆ 10 ಗಂಟೆಗೆ ಮಂಡ್ಯನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ತಿಳಿಸಿದರು.

ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಕೃಷಿ ವಿಶ್ವವಿದ್ಯಾಲಯದಿಂದ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗಾಗುವ ಅನುಕೂಲಗಳ ಬಗ್ಗೆ ಕೃಷಿ ತಜ್ಞರಿಂದ ವಿಶೇಷ ಉಪನ್ಯಾಸ ನೀಡಲಾಗುವುದು ಎಂದರು.

ಚುಂಚಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಉದ್ಘಾಟಿಸಲಿದ್ದು, ಮಾಜಿ ಉಪಮುಖ್ಯಮಂತ್ರಿ ಸಿ.ಎನ್.ಅಶ್ವಥ್ ನಾರಾಯಣ್ ನಾಲ್ವಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ನಿವೃತ್ತ ಲೋಕಾಯುಕ್ತ ಎನ್.ಸಂತೋಷ್ ಹೆಗ್ದೆ ಅಭಿನಂದಿಸುವರು. ಶಾಸಕ ಪಿ.ರವಿಕುಮಾರ್‌ಗೌಡ ಅಧ್ಯಕ್ಷತೆ ವಹಿಸಲಿದ್ದು, ನಿವೃತ್ತ ಪ್ರಾಂಶುಪಾಲ ಎಸ್.ಬಿ.ಶಂಕರೇಗೌಡ ನಾಲ್ವಡಿ ಮತ್ತು ಅಭಿನಂದಿತ ಸಚಿವರ ಕುರುತು ಮಾಡನಾಡಲಿದ್ದಾರೆ. ಜಿಲ್ಲ ಎಲ್ಲ ಶಾಸಕರು ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು.

ನಾಲ್ವಡಿಯವರ ಕುರಿತು ಆಯ್ದ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದ್ದು, ಕಾರ್ಯಕ್ರಮದಲ್ಲಿ ವಿಜೇತರಿಗೆ ನೆನಪಿನ ಕಾಣಿಕೆ, ಪ್ರಮಾಣ ಪತ್ರ ವಿತರಣೆ ಮಾಡಲಾಗುವುದು. ನಾಲ್ವಡಿ ಜಯಂತಿ ಅಂಗವಾಗಿ ರಕ್ತದಾನ ಮಾಡುವ ದಾನಿಗಳಿಗೆ ಪ್ರಶಸ್ತಿ ಪತ್ರ ವಿತರಣೆ ಹಾಗೂ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ವಿನಯ್ ರಾಮಕೃಷ್ಣ, ಜಗದೀಶ್, ಮಂಗಲ ಲಂಕೇಶ್, ದೇವೇಗೌಡ, ಟಿ.ಡಿ.ನಾಗರಾಜ್, ಚಂದ್ರಶೇಖರ್, ಶಕುಂತಲ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ