ಮಂಡ್ಯ ತಾಲೂಕಿನ ಹೊಳಲು ಗ್ರಾಮ ಪಂಚಾಯತಿಯ ಉಪಾಧ್ಯಕ್ಷರ ಚುನಾವಣೆಯಲ್ಲಿ ಹೆಚ್.ಸಿ .ಜಯಪ್ರಕಾಶ್ ನಾರಾಯಣ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅವರು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಸ್ವಗ್ರಾಮ ಕ್ಯಾತನಹಳ್ಳಿಯಲ್ಲಿ ಅಭಿನಂದಿಸಿದರು.
ಅಭಿನಂದನೆ ಸ್ವೀಕರಿಸಿದ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ ನೂತನವಾಗಿ ಆಯ್ಕೆಯಾದ ಉಪಾಧ್ಯಕ್ಷರಿಗೆ ಗ್ರಾಮದ ಅಭಿವೃದ್ಧಿಗೆ ಒಳ್ಳೆಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಮಾತ್ರ ಹಳ್ಳಿಗಳ ಅಭಿವೃದ್ಧಿ ಜಿಲ್ಲೆಯ ಅಭಿವೃದ್ಧಿಯಾಗುತ್ತದೆ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ರಮ್ಯಾಚೇತನ್, ಮಾಜಿ ಉಪಾಧ್ಯಕ್ಷರಾದ ನಾರಾಯಣ,
ಸದಸ್ಯ ಗೌರಮ್ಮ, ಹೊಳಲು ಗ್ರಾಮದ ಮುಖಂಡರಾದ ಜೆಟ್ಟಿಕುಮಾರ್, ರೈತ ಮುಖಂಡರಾದ ಚೇತನ್, ಮಂಜು, ಸೂರಿ, ಶ್ರೀನಿವಾಸ್, ಇತರರು ಹಾಜರಿದ್ದರು.




