Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾಳೆ ಪಾಂಡವಪುರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅಭಿನಂದನಾ ಸಮಾರಂಭ: ಸಿ.ಎಸ್ ಪುಟ್ಟರಾಜು

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಾಳೆ (ಜು.14) ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಅಭಿನಂಧನಾ ಸಮಾರಂಭ ಹಮ್ಮಿಕೊಂಡಿರುವುದಾಗಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು.

ಪಾಂಡವಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಲ್ಲಿನ ಪಾಂಡವ ಕ್ರೀಡಾಂಗಣದ ಬಳಿ ನಾಳೆ ಬೆಳಿಗ್ಗೆ 11 ಗಂಟೆಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ಕಾರ್ಯಕ್ರಮಕ್ಕೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.

ಈ ಕಾರ್ಯಕ್ರಮದ ಬಗ್ಗೆ ಕೆಲವರು ಗೊಂದಲ ಸೃಷ್ಟಿಸುವ ಸಂಚು ಮಾಡಿದ್ದು, ಕಾರ್ಯಕ್ರಮಕ್ಕೆ ಮದ್ಯ ಹಂಚಿಕೆ ಮಾಡಿ ಗೊಂದಲ ಮೂಡಿಸುವ ಹುನ್ನಾರ ನಡೆಸಿರುವುದಾಗಿ ಆರೋಪಿಸಿದರು. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೇರಿ ಅಬಕಾರಿ ಇಲಾಖೆ ಅಧಿಕಾರಿಗಳು ಕ್ರಮ ವಹಿಸುವಂತೆ ಅವರು ಮನವಿ ಮಾಡಲಾಗಿದೆ ಎಂದರು.

ಅಭಿನಂದನಾ ಸಮಾರಂಭದಲ್ಲಿ ಸುಮಾರು 50 ಸಾವಿರ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆಯಿದ್ದು, ಬರುವವರಿಗೆಲ್ಲಾ ಸಸ್ಯಹಾರಿ ಮತ್ತು ಮಾಂಸಹಾರಿ ಊಟದ ವ್ಯವಸ್ಥೆ ಮಾಡಿಕೊಂಡಿರುವುದಾಗಿ‌ ತಿಳಿಸಿದರು.

nudikarnataka.com

ನೀರು ಹರಿಸಬಾರದು

ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ನೀರು ಹರಿಸಲು ಮುಂದಾದರೆ ಜಿಲ್ಲೆಯ ರೈತರೊಂದಿಗೆ ಹೋರಾಟ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಕುಮಾರಸ್ವಾಮಿ ಅವರು ಕಾವೇರಿ ವಿಚಾರದಲ್ಲಿ ಮದ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆ ಹರಿಸುವಂತೆ ಕೈ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಒಕ್ಕೂಟ ವ್ಯವಸ್ಥೆ ಹಾಗು ಕಾನೂನು ಚೌಕಟ್ಟು ವ್ಯವಸ್ಥೆಯಲ್ಲಿ ಕುಮಾರಸ್ವಾಮಿ ಅವರು ಸಮಸ್ಯೆ ಬಗೆಹರಿಸುವ ಬಗ್ಗೆ ಹರಿಸುವ ವಿಶ್ವಾಸವಿದೆ ಎಂದರು.

ಜಿಲ್ಲೆಯ ಜನರಿಗೆ ತೊಂದರೆ ಆಗದ ರೀತಿಯಲ್ಲಿ ಕುಮಾರಣ್ಣ ನಡೆದುಕೊಳ್ಳುತ್ತಾರೆ

ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ತಮಿಳುನಾಡಿನಗೆ ಬಿಡಬಾರದು. ರೈತರ ಜಮೀನಿನಲ್ಲಿ ನೀರಿಲ್ಲದೆ ತೆಕ್ಕಲು ಬೆಳೆದು ನಿಂತಿದೆ. ಯಾವ ಜವಾಬ್ದಾರಿಯನ್ನು ಯಾರು ನಿರ್ವಹಿಸಬೇಕು ಅನ್ನೋದನ್ನ ಅಂಬೇಡ್ಕರ್ ಸಂವಿಧಾನದಲ್ಲಿ ಬರೆದಿಟ್ಟಿದ್ದಾರೆ. ನಾವು ರೈತರ ಪರ ಇದ್ದೇವೆ. ರೈತರ ಪರ ಕೆಲಸ ಮಾಡ್ತೇವೆ. ಕಾನೂನು ಚೌಕಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಮೋದಿ ಅವರನ್ನ ಭೇಟಿ ಮಾಡಿ ಕುಮಾರಣ್ಣ ಕಾವೇರಿ ಸಮಸ್ಯೆ ಬಗ್ಗೆ ಚರ್ಚೆ ಮಾಡ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜನ ಸಂಪರ್ಕಸಭೆಯಲ್ಲಿ ಅಧಿಕಾರಿಗಳು ಬಾರದ ರೀತಿ ಒತ್ತಡ ಹಾಕಿದ್ರು, ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಕೇಂದ್ರ ಸಚವರನ್ನ ಯಾವ ರೀತಿ ನಡೆಸಿಕೊಂಡರು? ಜಿಲ್ಲಾ ಉಸ್ತುವಾರಿ ಸಚಿವರ,. ಕುಮಾರಣ್ಣ ಕಾರ್ಯಕ್ರಮಕ್ಕೆ ಒಬ್ಬ ಅಧಿಕಾರಿಗಳು ಬಾರದ ರೀತಿ ಮಾಡಿದ್ರು, ಜನರಿಗೆ ನ್ಯಾಯ ಕೊಡಿಸಲು ಕುಮಾರಣ್ಣ ಮುಂದಾಗಿದ್ದಾರೆ. ಚಾಮರಾಜನಗರದಲ್ಲಿ ಕೊಟ್ಟ ಅರ್ಜಿಯನ್ನ ಕಸದ ಬುಟ್ಟಿಗೆ ಸಿಎಂ ಹಾಕಿದ್ದಾರೆ. ಅಂತಹ ನಾಯಕ ನಮ್ಮ ನಾಯಕ ಕುಮಾರಣ್ಣ ಅಲ್ಲ, ಜನರ ಸಮಸ್ಯೆ ನಿವಾರಿಸುತ್ತಾರೆ. ರೈತರ ಪರ ಕುಮಾರಣ್ಣ ಇರ್ತಾರೆ.
ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡ್ತಾರೆ ಎಂದರು.

ಗೋಷ್ಠಿಯಲ್ಲಿ ಮಾಜಿ ಶಾಸಕರ ಡಾ.ಕೆ.ಅನ್ನಧಾನಿ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮಲ್ಲೇಶ್, ಜಿ.ಪಂ. ಮಾಜಿ ಸದಸ್ಯ ಅಶೋಕ್ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!