Thursday, September 19, 2024

ಪ್ರಾಯೋಗಿಕ ಆವೃತ್ತಿ

ನ.26ರಂದು ಮಂಡ್ಯ ಜಿಲ್ಲೆಯ ನೂತನ ಶಾಸಕರಿಗೆ ಅಭಿನಂದನೆ

ಮಂಡ್ಯ ಜಿಲ್ಲಾ ಕುರುಬರ ಸಂಘದ ವತಿಯಿಂದ “ಪ್ರತಿಭಾ ಪುರಸ್ಕಾರ” ಹಾಗೂ ಮಂಡ್ಯ ಜಿಲ್ಲೆಯಿಂದ ವಿಧಾನಸಭೆಗೆ ಆಯ್ಕೆಯಾಗಿರುವ ನೂತರ ಶಾಸಕರಿಗೆ ಅಭಿನಂದನಾ ಸಮಾರಂಭನ ನ.26ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯನಗರದ ಕನಕಭವನದಲ್ಲಿ ನಡೆಯಲಿದೆ ಎಂದು ಮಂಡ್ಯ ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಎಂ.ಎಲ್ ಸುರೇಶ್ ತಿಳಿಸಿದರು.

ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾರ್ಯಕ್ರಮದ ಪ್ರಚಾರದ ಭಿತ್ತಿಪತ್ರವನ್ನು ಬಿಡುಗೊಳಿಸಿ ಮಾತನಾಡಿದ ಅವರು, ಜಿಲ್ಲಾ ಮಟ್ಟದಲ್ಲಿ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 90 ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ 85 ಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಮೈಸೂರು ವಿಭಾಗ ಕೆ.ಆರ್.ನಗರ ಶಾಖೆಯ ಕಾಗಿನೆಲೆ ಕನಕಗುರು ಪೀಠದ ಪೀಠಾಧ್ಯಕ್ಷ ಶಿವಾನಂದಪುರಿ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ವರುಣಾ ಕ್ಷೇತ್ರ ಆಶ್ರಯ ಕಮಿಟಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ, ಅಧ್ಯಕ್ಷತೆಯನ್ನು ಮಂಡ್ಯ ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಎಂಎಲ್ ಸುರೇಶ್ ವಹಿಸಲಿದ್ದಾರೆಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಿದ್ದಾರೆ, ನಗರಾಭಿವೃದ್ದಿ ಸಚಿವ ಹಾಗೂ ಮಾಜಿ ಸಚಿವ ಎಚ್‌ಎಂ ರೇವಣ್ಣ ನೂತನ ಶಾಸಕರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಸಕ ಪಿ.ಎಂ ನರೇಂದ್ರಸ್ವಾಮಿ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಬಿ.ಎಸ್. ಶಿವಣ್ಣ, ಖ್ಯಾತ ಉದ್ಯಮಿ ಡಿ. ನರಹರಿ, ರಾಜ್ಯ ಆರ್.ಟಿ.ಓ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಅವರು ಪ್ರತಿಭಾಪುರಸ್ಕಾರ ನೀಡಿ ಗೌರವಿಸಲಿದ್ದಾರೆಂದು ತಿಳಿಸಿದರು.

ಮಂಡ್ಯ ಜಿಲ್ಲೆಯಿಂದ ನೂತನವಾಗಿ ಶಾಸಕರಾಗಿ ಅಯ್ಕೆಯಾಗಿರುವ ಸಚಿವ ಚಲುವರಾಯಸ್ವಾಮಿ, ಮಳವಳ್ಳಿ ಶಾಸಕ ಪಿ.ಎಂ ನರೇಂದ್ರಸ್ವಾಮಿ, ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಮಂಡ್ಯ ಶಾಸಕ ರವಿಕುಮಾರ್,ಕೆ.ಆರ್ ನಗರ ಶಾಸಕ ರವಿಶಂಕರ್, ಮೇಲುಕೋಟೆ ಶಾಸಕ ದರ್ಶನ್‌ಪುಟ್ಟಣ್ಣಯ್ಯ, ಮದ್ದೂರು ಶಾಸಕ ಕೆ.ಎಂ ಉದಯ್, ಕೆ.ಆರ್‌ಪೇಟೆ ಶಾಸಕ ಹೆಚ್.ಟಿ ಮಂಜುನಾಥ್, ಹನೂರು ಶಾಸಕ ಮಂಜುನಾಥ್, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಮಾದೇಗೌಡ, ಮರಿತಿಬ್ಬೇಗೌಡ ಅವರನ್ನು ಅಭಿನಂದಿಸಿ ಗೌರವಿಸಲಾಗುವುದು ಎಂದರು.

ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯ ಎಲ್ಲಾ ಸಮುದಾಯದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಕ್ಷಾತೀತವಾಗಿ ಜತ್ಯಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಿದರು.

ಗೋಷ್ಠಿಯಲ್ಲಿ ಕುರುಬರ ಸಂಘದ ಮಳವಳ್ಳಿ ತಾಲ್ಲೂಕು ಅಧ್ಯಕ್ಷ ನಾಗರಾಜು, ಮುಖಂಡರಾದ ಶಿವಣ್ಣ, ನಿಂಗರಾಜು, ಲಿಂಗರಾಜು, ಪೂಜಾರಿ ಮಹೇಶ್, ರಾಜು, ನಿಂಗರಾಜು, ಕುಮಾರ್, ಪುಟ್ಟಸ್ವಾಮಿ ಗೌರಮ್ಮ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!