Saturday, May 18, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ರಾಷ್ಟ್ರಪ್ರಶಸ್ತಿ ಪುರಸ್ಕೃತ ಮೂವರು ಶಿಕ್ಷಕರಿಗೆ ಅಭಿನಂದನೆ

ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರ ವೇದಿಕೆ ಕರ್ನಾಟಕ ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಡ್ಯ ಜಿಲ್ಲೆ ಇವರ ಸಹಯೋಗದಲ್ಲಿ ಬುಧವಾರ ಬೆಂಗಳೂರಿನ ಮಹಾಲಕ್ಷ್ಮಿ ಪುರಂನಲ್ಲಿರುವ ಬಿಜಿಎಸ್ ಪಿಯು ಕಾಲೇಜಿನಲ್ಲಿ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಅಭಿನಂದನಾ ಸಮಾರಂಭ ಹಾಗೂ ಪ್ರಶಸ್ತಿ ಶಿಕ್ಷಕರ ಸಾಧನೆಯ ಪರಿಚಯ ಗ್ರಂಥವನ್ನು ಬಿಡುಗಡೆ ಸಮಾರಂಭ ನಡೆಯಿತು.

ಈ ಸಮಾರಂಭದಲ್ಲಿ ಮಂಡ್ಯ ಜಿಲ್ಲೆಯ ನಿವೃತ್ತ ಉಪನ್ಯಾಸಕ, ಪತ್ರಕರ್ತ ಹೊಳಲು ಶ್ರೀಧರ್, ದುದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಟಿ.ವೀಣಾ ಹಾಗೂ ವಿಸಿ ಫಾರಂ ಪದವಿ ಪೂರ್ವ ಕಾಲೇಜಿನ ಶಿಕ್ಷಕಿ ಬಿ.ಸಿ.ರಜನಿ ಅವರನ್ನು ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥಸ್ವಾಮೀಜಿ ಸನ್ಮಾನಿಸಿ ಆಶೀರ್ವಚನ ನೀಡಿದರು.

ಮೈಸೂರು ಭಾರತೀಯ ಭಾಷಾ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕರಾದ ಪ್ರೊ.ಡಾ.ನೀಲಗಿರಿ ತಳವಾರ್ ಪ್ರಶಸ್ತಿ ಶಿಕ್ಷಕರ ಸಾಧನೆಯ ಪುಸ್ತಕ ಕುರಿತು ಮಾತನಾಡಿದರು.
ಬೆಂಗಳೂರು ವಿವಿ ವಿಶ್ರಾಂತ ಉಪಕುಲಪತಿ ಪ್ರೊ.ಬಿ.ತಿಮ್ಮೇಗೌಡ ಪ್ರಶಸ್ತಿ ಶಿಕ್ಷಕರ ಸಾಧನೆಯ ಪುಸ್ತಕ ಬಿಡುಗಡೆ ಮಾಡಿದರು. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಅಪ್ಪಾಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ, ಆಡಳಿತಾಧಿಕಾರಿ ಶಿವರಾಮರೆಡ್ಡಿ, ಶಿವರಾಮು ಹಾಜರಿದ್ದರು. ನೂರಕ್ಕೂ ಹೆಚ್ಚು ಪ್ರಶಸ್ತಿ ಪುರಸ್ಕೃತ ಶಿಕ್ಷಕರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!