ಕರ್ನಾಟಕ ಸಂಘದ ವತಿಯಿಂದ ಮಂಡ್ಯ ಜಿಲ್ಲಾ ಜನಪ್ರತಿನಿಧಿಗಳ ಅಭಿನಂದನಾ ಸಮಾರಂಭವನ್ನು ಜೂ.10ರಂದು ಸಂಜೆ 4 ಗಂಟೆಗೆ ಮಂಡ್ಯ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ ಗೌಡ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಕೊಮ್ಮೇರಹಳ್ಳಿ ವಿಶ್ವಮಾನವ ಕ್ಷೇತ್ರ ಪುರುಷೋತ್ತಮನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು. ಮಾಜಿ ಶಾಸಕ ಬಿ.ರಾಮಕೃಷ್ಣ ಅಧ್ಯಕ್ಷತೆ ವಹಿಸುವರು.ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ನೂತನ ಶಾಸಕರನ್ನು ಅಭಿನಂದಿಸುವರು ಎಂದರು.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ, ರವಿಕುಮಾರ್ ಗೌಡ ಗಣಿಗ, ಉದಯ್ ಕೆ.ಎಂ.ಕದಲೂರು, ಹೆಚ್.ಟಿ.ಮಂಜು ಹಾಗೂ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಅಭಿನಂದಿಸಲಾಗುವುದು ಎಂದರು.
ವಿಶ್ರಾಂತ ಪ್ರಾಚಾರ್ಯ ಡಾ.ಎಸ್.ಬಿ.ಶಂಕರಗೌಡ ಅಭಿನಂದನಾ ಭಾಷಣ ಮಾಡುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಮಾಜಿ ಶಾಸಕರಾದ ಎಂ.ಶ್ರೀನಿವಾಸ್, ಕೆ.ಟಿ.ಶ್ರೀಕಂಠೇಗೌಡ, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಪ್ರುಲ್ಲಾಖಾನ್ ಭಾಗವಹಿಸುವರು ಎಂದರು.
ಗೋಷ್ಠಿಯಲ್ಲಿ ಹೆಚ್.ಡಿ.ಸೋಮಶೇಖರ್, ಮೋಹನ್, ನಾಗಪ್ಪ ಹಾಗೂ ಶಿವರುದ್ರಪ್ಪ ಉಪಸ್ಥಿತರಿದ್ದರು.




