Tuesday, November 17, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯಕ್ಕೆ ನಾಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗಮನ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮೇ.2ರಂದು ಮಂಡ್ಯಕ್ಕೆ ಆಗಮಿಸಲಿದ್ದು, ಕಾಂಗ್ರೆಸ್ ಆಯೋಜಿಸಲಿರುವ ಬಹಿರಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮಂಡ್ಯನಗರದ ಸರ್ಕಾರಿ ಬಾಲಕಿಯರ ಕಾಲೇಜು (ಕಲ್ಲು ಕಟ್ಟಡ) ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಯಲ್ಲಿ ಅವರು ಮಂಡ್ಯ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಹೆಚ್.ಕೃಷ್ಣ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಿ.ರವಿಕುಮಾರ್ ಗಣಿಗ ಸೇರಿದಂತೆ ಮತ್ತಿತರರು ಭಾಗವಹಿಸುವರು ಎಂದರು.

ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯವಿಲ್ಲ

ಮಂಡ್ಯ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಮುಖಂಡರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಟಿಕೆಟ್ ಆಕಾಂಕ್ಷಿಗಳಾಗಿದ್ದ 15 ಮಂದಿಯೂ ಒಗ್ಗಟ್ಟಿನಿಂದ ಇದ್ದೇವೆ, ಆದ್ದರಿಂದ ಈ ಬಾರಿ ಜಿಲ್ಲೆಯಲ್ಲಿ ಏಳಕ್ಕೆ ಏಳು ಕ್ಷೇತ್ರಗಳನ್ನು ಗೆಲ್ಲುತ್ತೇವೆಂದು ಡಾ.ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.

ಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಅಪ್ಪಾಜಿಗೌಡ, ಅಮ್ಜದ್ ಪಾಷ, ಪಲ್ಲವಿ ಹಾಗೂ ವೀಣಾ ಶಂಕರ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ