Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ಸಂಚಾಲಕರಾಗಿ ಎಲ್.ಕೃಷ್ಣ ನೇಮಕ

ಕನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ರವರ ಸೂಚನೆಯ ಮೇರೆಗೆ, ಕಾಂಗ್ರೆಸ್ ಮುಖಂಡರಾದ ಎಲ್.ಕೃಷ್ಣ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮಂಡ್ಯ ಜಿಲ್ಲಾ ಮಾಧ್ಯಮ ಸಂಚಾಲಕರಾಗಿ ಇಂದಿನಿಂದ ಜಾರಿಗೆ ಬರುವಂತೆ ನೇಮಿಸಲಾಗಿದ್ದು ಎಂದು ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಹಾಗೂ ಮಧ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ ರವಿಕುಮಾರ್ ಅವರ ಮೂಲಕ ನೇಮಕಾತಿ ಆದೇಶ ಪತ್ರವನ್ನು ಸ್ವೀಕರಿಸಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬು , ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್,ಒಕ್ಕಲಿಗ ನಿಗಮದ ಅಧ್ಯಕ್ಷರಾದ ಎಂ.ಎಸ್.ಆತ್ಮನಂದ , ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ ಪಿ ಪ್ರಕಾಶ್ ಅವರಿಗೆ ಅಭಿನಂದಿಸಿ ನೇಮಕಾತಿ ಆದೇಶ ಪತ್ರವನ್ನು ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿ ಡಿ ಗಂಗಾಧರ್, ತಮಗೆ ನೀಡಿರುವ ಈ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಸಿದ್ದಾಂತಗಳಿಗೆ ಅನುಗುಣವಾಗಿ ತಾವು ಪಕ್ಷದ ವಕ್ತಾರರಾಗಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಲು ಮತ್ತು ಪಕ್ಷದ ಸೂಚನೆಗಳಿಗೆ ಅನುಗುಣವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ , ಜಿಲ್ಲಾ ಕಾಂಗ್ರೆಸ್ ಸಮಿತಿ ನಗರ ಪ್ರಚಾರ ಸಮಿತಿ ಅಧ್ಯಕ್ಷ ಎಂ ಎಸ್ ಅಭಿಲಾಶ್ , ಪಿ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಶಿವಲಿಂಗೇಗೌಡ, ಗುರು, ಒಕ್ಕಲಿಗರ ಸೇವ್ ಟ್ರಸ್ಟ್ ಅಧ್ಯಕ್ಷರಾದ ಸಿ ಜೆ ತಮ್ಮಯ್ಯ , ಜಿಲ್ಲಾಧ್ಯಕ್ಷರಾದ ಕೆ ಸಿ ರವೀಂದ್ರ , ಎಂ ಎನ್ ಶಿವರಾಮು ,ಮಹೇಶ್ , ನಾಗಲಿಂಗಪ್ಪ , ಅಂಜನಾ ಶ್ರೀಕಾಂತ್, ಜಲೇಂದ್ರ ಸೇರಿದಂತೆ ಇನ್ನಿತರ ಮುಖಂಡರುಗಳು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ