Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಕಾಂಗ್ರೆಸ್ ಅಭ್ಯರ್ಥಿಯಾಗಿ ಗಣಿಗ ರವಿಕುಮಾರ್ ನಾಮಪತ್ರ

ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿಕುಮಾರ್ ಇಂದು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಮಂಡ್ಯ ನಗರದ ಕಾಳಿಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ತರುವಾಯ ತಾಲೂಕು ಕಚೇರಿಗೆ ಆಗಮಿಸಿದ ಗಣಿಗ ರವಿಕುಮಾರ್ ಪತ್ನಿ ಸೌಂದರ್ಯ, ಕಾಂಗ್ರೆಸ್ ಮುಖಂಡರಾದ ಕೀಲಾರ ರಾಧಾಕೃಷ್ಣ, ಎಂ.ಎಸ್‌. ಚಿದಂಬರ್, ಸಿದ್ದಾರೂಢ ಸತೀಶ್ ಗೌಡ ಜೊತೆ ತೆರಳಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗಣಿಗ ರವಿಕುಮಾರ್, ನಮ್ಮ ಪಕ್ಷದ ರಾಷ್ಟ್ರೀಯ ಮುಖಂಡರು, ಕೆಪಿಸಿಸಿ ಅಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರು,ಕೆಪಿಸಿಸಿ ಉಪಾಧ್ಯಕ್ಷ ಚಲುವರಾಯಸ್ವಾಮಿ ಮತ್ತು 15 ಮಂದಿ ಆಕಾಂಕ್ಷಿತರೆಲ್ಲ ಸೇರಿ ನನಗೆ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಅವಕಾಶ ಕಲ್ಪಿಸಿದ್ದು, ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಗೆಲುವು ಸಾಧಿಸುತ್ತೇವೆ ಎಂದರು.

ರಾಜ್ಯದಲ್ಲಿರುವ ಭ್ರಷ್ಟ ಸರ್ಕಾರದಿಂದ ಜನರು ಬಸವಳಿದಿದ್ದಾರೆ. ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲೂ ಇದ್ದೂ ಇಲ್ಲದಂತಿರುವ ಶಾಸಕರಿಂದ ಅಭಿವೃದ್ಧಿ ಕುಂಠಿತವಾಗಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ನಾನು ಕೂಡ ಗೆಲುವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಿಕೆಟ್ ಆಕಾಂಕ್ಷಿಗಳಾಗಿದ್ದ ಎಂ.ಎಸ್. ಆತ್ಮಾನಂದ, ಅಮರಾವತಿ ಚಂದ್ರಶೇಖರ್ ಅವರ ಮನೆಗೆ ತೆರಳಿ ಆಶೀರ್ವಾದ ಪಡೆದಿದ್ದೇನೆ.ನಮ್ಮ ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ. ಕೀಲಾರ ರಾಧಾಕೃಷ್ಣರವರು, ಸಿದ್ದಾರೂಢ ಸತೀಶ್ ಗೌಡ, ಚಿದಂಬರ್ ಸೇರಿದಂತೆ ಎಲ್ಲಾ ಅಕಾಂಕ್ಷಿತರು ಒಗ್ಗಟ್ಟಾಗಿದ್ದೇವೆ. ಮಂಡ್ಯ ಕ್ಷೇತ್ರ ಅಭಿವೃದ್ಧಿಯಾಗಿಲ್ಲ. ರಸ್ತೆಯಲ್ಲಿ ಪುಟ್ಪಾತ್ ಇಲ್ಲವಾಗಿದೆ.ಮಂಡ್ಯ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಹೊಸ ರೂಪ ಕೊಡಬೇಕಾಗಿದೆ. ನಮಗೆ ಜೆಡಿಎಸ್ ನೇರ ಎದುರಾಳಿ. ಯಾರೇ ಎದುರಾಳಿಯಾದರೂ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇನೆ ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!