Thursday, June 13, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಸುರೇಶ್ ಕಂಠಿ

ಏ.26ರಂದು ನಡೆದ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಗೆಲ್ಲುವುದು ಖಚಿತವೆಂದು ಕಾಂಗ್ರೆಸ್ ವಕ್ತಾರ ಸುರೇಶ್ ಕಂಠಿ ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ನಮ್ಮನ್ನು ಕೈ ಹಿಡಿದಿದ್ದು, ವಿಶೇಷವಾಗಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪರ ಮತ ನೀಡಿದ್ದು, ಜೆಡಿಎಸ್ ಬಿಜೆಪಿ ಮೈತ್ರಿಯನ್ನು ತಿರಸ್ಕರಿಸಿದ್ದಾರೆ ಎಂದರು.

ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಆಯಾ ಮತಗಟ್ಟೆಯಲ್ಲಿ ಶ್ರಮವಹಿಸಿ ಕಾಂಗ್ರೇಸ್ ಅಭ್ಯರ್ಥಿ ಪರ ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದಾರೆ, ಅವರೆಲ್ಲರಿಗೂ ಕಾಂಗ್ರೇಸ್ ಪಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರ ಪರವಾಗಿ ಧನ್ಯವಾದಗಳನ್ನು ತಿಳಿಸುತ್ತೇವೆ ಎಂದರು.

ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಡಾ.ಹೆಚ್.ಎನ್.ರವೀಂದ್ರ ಅವರು ಸಚಿವ ಚಲುವರಾಯಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡುತ್ತಿರುವುದನ್ನು ನಿಲ್ಲಿಸಬೇಕು, ಇಲ್ಲವಾದರೆ ಅವರ ವಿರುದ್ದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಡಾ. ರವೀಂದ್ರ ಅವರು ತಮ್ಮ ಅಭಿಪ್ರಾಯವನ್ನು ಎಂದೂ ಪಕ್ಷದ ವೇದಿಕೆಯಲ್ಲಿ ಚರ್ಚಿಸದೆ ಪದೇ ಪದೇ ಮಾಧ್ಯಮಗಳ ಮುಂದೆ ಪ್ರಚಾರಕ್ಕಾಗಿ ಈ ರೀತಿ ಮತ್ತೆ ಮಾತನಾಡಿದರೆ ಅವರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದರು.

ಗೋ‍ಷ್ಠಿಯಲ್ಲಿ ಕಾಂಗ್ರೆಸ್ ಎಸ್ಸಿ, ಎಸ್ಪಿ ವಿಭಾಗದ ಜಿಲ್ಲಾಧ್ಯಕ್ಷ ಸುರೇಶ್ ಕಂಠಿ, ಮುಖಂಡರಾದ ಡಿ.ಎಲ್.ಶಂಕರಲಿಂಗೇಗೌಡ, ಸಿದ್ದರಾಜು, ಪ್ರಾಣೀಶ್ ಹಾಗೂ ಕುಮಾರಸ್ವಾಮಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!