ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ಮೂಲಕ ಮತದಾರರಿಗೆ ಉತ್ತಮ ಸಂದೇಶ ನೀಡಬೇಕೆಂದು ಮಾಜಿ ಶಾಸಕ ರಮೇಶ ಬಂಡಿಸಿದ್ದೇಗೌಡ ಕಾರ್ಯಕರ್ತರಿಗೆ ಕರೆ ನೀಡಿದರು.
ಮಂಡ್ಯ ನಗರದ ಕಲ್ಲಹಳ್ಳಿಯ ಎಪಿಎಂಸಿ ಮಾರುಕಟ್ಟೆ ಬಳಿ ಇರುವ ನಾಗಸಿರಿ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ದಕ್ಷಿಣ ಪದವೀಧರ ಕ್ಷೇತ್ರದ ಅಭ್ಯರ್ಥಿ ಮಧು ಜಿ. ಮಾದೇಗೌಡರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮವಾದ ವಾತಾವರಣ ನಿರ್ಮಾಣವಾಗಿದೆ.ಜಿಲ್ಲೆಯ ಜನತೆ ಪಕ್ಷದ ಪರ ಸಹಾನುಭೂತಿ ಹೊಂದಿದ್ದಾರೆ.
ಅಭ್ಯರ್ಥಿ ಮಧು ಜಿ. ಮಾದೇಗೌಡರಿಗೆ ರಾಜಕೀಯ ಹಿನ್ನೆಲೆ ಇದ್ದು, ಅವರ ತಂದೆ ಮಾಡಿದಂತಹ ಹೋರಾಟಗಳನ್ನು ಜನರಿಗೆ ತಿಳಿಸಿಕೊಡಬೇಕು. ಕಾಂಗ್ರೆಸ್ ಕಾರ್ಯಕರ್ತರು ಒಂದುಗೂಡಿ ಚುನಾವಣೆಯನ್ನು ಎದುರಿಸಬೇಕು.ಕಾಂಗ್ರೆಸ್ ಅಭ್ಯರ್ಥಿ ಮಧು ಮಾದೇಗೌಡ ಅವರ ಗೆಲುವಿಗಾಗಿ ಶ್ರಮಿಸಬೇಕು ಎಂದರು.
ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಕಾಂಗ್ರೆಸ್ ಮುಖಂಡರಾದ ಡಾ.ಕೃಷ್ಣ, ಶಿವಾನಂದ,ಹಾಲಹಳ್ಳಿ ರಾಮಲಿಂಗಯ್ಯ, ಸಿ.ಎಂ.ದ್ಯಾವಪ್ಪ ಸೇರಿದಂತೆ ಹಲವರಿದ್ದರು.