ರಿಟೈರ್ಡ್ ಹರ್ಟ್ ಆಗಿರುವ ಸಿ.ಟಿ.ರವಿ ಈಗ ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ, ಅವರ ಅರಣ್ಯ ರೋಧನಕ್ಕೆ ಸಂಸದ ಪ್ರತಾಪ್ ಸಿಂಹ ದನಿ ಜೋಡಿಸಿದ್ದಾರೆ. ಇಬ್ಬರಿಗೂ ದಮ್ಮು ತಾಕತ್ತು ಇದ್ದರೆ ಅಡ್ಜಸ್ಟಮೆಂಟ್ ಮಾಡಿಕೊಂಡ ತಮ್ಮ ಪಕ್ಷದ ನಾಯಕರ ಹೆಸರು ಹೇಳಿ ಆರೋಪಿಸಲಿ ಎಂದು ಕಾಂಗ್ರೆಸ್ ಪಕ್ಷವು ಬಿಜೆಪಿ ನಾಯಕರಿಗೆ ಸವಾಲು ಹಾಕಿದೆ.
ರಿಟೈರ್ಡ್ ಹರ್ಟ್ ಆಗಿರುವ @CTRavi_BJP ಈಗ ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ, ಅವರ ಅರಣ್ಯ ರೋಧನಕ್ಕೆ @mepratap ದನಿ ಜೋಡಿಸಿದ್ದಾರೆ.
ಇಬ್ಬರಿಗೂ ದಮ್ಮು ತಾಕತ್ತು ಇದ್ದರೆ ಅಡ್ಜಸ್ಟಮೆಂಟ್ ಮಾಡಿಕೊಂಡ ತಮ್ಮ ಪಕ್ಷದ ನಾಯಕರ ಹೆಸರು ಹೇಳಿ ಆರೋಪಿಸಲಿ.
ಅಂದಹಾಗೆ ಬಿಜೆಪಿಯೊಂದಿಗೆ ಅಡ್ಜಸ್ಟ್ ಮಾಡಿಕೊಂಡಿದ್ದ ಕುಮಾರಸ್ವಾಮಿ ತಲೆ…
— Karnataka Congress (@INCKarnataka) June 14, 2023
“>
ಅಂದ ಹಾಗೆ ಬಿಜೆಪಿಯೊಂದಿಗೆ ಅಡ್ಜಸ್ಟ್ ಮಾಡಿಕೊಂಡಿದ್ದ ಕುಮಾರಸ್ವಾಮಿ ತಲೆ ಸವರಿಕೊಂಡು ನಗುತ್ತಿದ್ದಾರಂತೆ ಅಲ್ಲವೇ ? ಎಂದು ಕೆಣಕಿರುವ ಕಾಂಗ್ರೆಸ್, ಪ್ರತಾಪ್ ಸಿಂಹ ಅವರೇ, ಚಿಂತಿಸಬೇಡಿ, ಬಿಜೆಪಿಯ ಎಲ್ಲಾ ಹಗರಣಗಳು, ಅಕ್ರಮಗಳು, ಲೂಟಿಗಳನ್ನು ತನಿಖೆಗೆ ವಹಿಸುತ್ತೇವೆ. ಮುಲಾಜು ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿಯ ಯಾರೊಬ್ಬರ ಅಂಜಿಕೆಯೂ ನಮಗಿಲ್ಲ. ಬಿಜೆಪಿ ಮಾಡಿದ ಲೂಟಿಗಳನ್ನು ವಾಪಸ್ ಕಕ್ಕಿಸುತ್ತೇವೆ! ತನಿಖೆಗೆ ತಾವೂ ಕೂಡ ಸಾಕ್ಷಿ ನೀಡಬಹುದು, ತಮ್ಮ ನಾಯಕರ ಲೂಟಿ ಬಗ್ಗೆ ನಿಮಗೆ ಹೆಚ್ಚು ತಿಳಿದಿರುತ್ತದೆ ಎಂದು ಟ್ಟಿಟ್ ಮೂಲಕ ಕಾಲೆಳೆದಿದೆ.
ಸುಳ್ಳು ಹೇಳುವುದನ್ನು ಮೋದಿಯವರಿಂದ ಕಲಿತಿರಾ?
ವಿದ್ಯುತ್ ದರ ಏರಿಕೆಯ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದು ನಾವಲ್ಲ ಕಾಂಗ್ರೆಸ್ ಸರ್ಕಾರ” ಎಂದಿರುವ ಬಸವರಾಜ ಬೊಮ್ಮಾಯಿ ಅವರೇ, ದರ ಏರಿಕೆ ಜಾರಿಯಾಗಿದ್ದು ಮೇ 12ನೇ ತಾರೀಖು, ಆಗ ನಮ್ಮ ಸರ್ಕಾರ ರಚನೆಯಾಗಿತ್ತಾ? ಹಿಂದಿನ ಸರ್ಕಾರದ ಅನುಮತಿ ಇಲ್ಲದೆ KERC ದರ ಏರಿಸಲು ಹೇಗೆ ಸಾಧ್ಯ? ಇಷ್ಟೊಂದು ಸುಳ್ಳು ಹೇಳುವುದನ್ನು ಮೋದಿಯವರಿಂದ ಕಲಿತಿರಾ? ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.




