Monday, November 23, 2026

ಪ್ರಾಯೋಗಿಕ ಆವೃತ್ತಿ

100 ದಿನ ಪೂರೈಸಿದ ಕಾಂಗ್ರೆಸ್ ಸರ್ಕಾರ| ಗೃಹಲಕ್ಷ್ಮಿಗೆ ₹17,500 ಕೋಟಿ ಮೀಸಲು

ಕುಟುಂಬ ನಿರ್ವಹಣೆಯ ಹೊಣೆ ಹೊತ್ತ ಮಹಿಳೆಯರಿಗೆ ನಿತ್ಯ ಎದುರಾಗುವ ಬೆಲೆಯೇರಿಕೆಯ ಸಂಕಷ್ಟಗಳನ್ನು ತಗ್ಗಿಸಿ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ನೆರವಾಗುವ ಉದ್ದೇಶದೊಂದಿಗೆ ನಾವು ಜಾರಿಗೊಳಿಸಲಿರುವ “ಗೃಹಲಕ್ಷ್ಮಿ” ಯೋಜನೆಗೆ ಈ ವರೆಗೆ 1.08 ಕೋಟಿ ಮಹಿಳೆಯರು ಯಶಸ್ವಿಯಾಗಿ ನೋಂದಣಿ ಮಾಡಿದ್ದು, ಈ ತಿಂಗಳ 30 ರಿಂದ ಎಲ್ಲಾ ನೋಂದಾಯಿತ ಮಹಿಳೆಯರ ಬ್ಯಾಂಕ್ ಖಾತೆಗೆ ಮಾಸಿಕ ರೂ. 2,000 ನೇರ ವರ್ಗಾವಣೆ ಮಾಡಲಿದ್ದೇವೆ. ಪ್ರಸಕ್ತ ಸಾಲಿನಲ್ಲಿ ಈ ಕಾರ್ಯಕ್ರಮಕ್ಕಾಗಿ ರೂ. 17,500 ಕೋಟಿ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ” 100 ದಿನಗಳು” ಪೂರೈಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದಿದ್ದಾರೆ.

ಗ್ಯಾರಂಟಿ ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಜೊತೆಜೊತೆಗೆ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಕನಕದಾಸರು, ನಾರಾಯಣ ಗುರು ಮುಂತಾದ ದಾರ್ಶನಿಕರು ತೋರಿದ ಸಮಾನತೆಯ ಹಾದಿಯಲ್ಲಿ ನಾಡನ್ನು ಮುನ್ನಡಿಸಿಕೊಂಡು ಹೋಗುತ್ತಿದ್ದೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಪಯಣಕ್ಕಿಂದು ಶತಕ ಸಂಭ್ರಮ. ಈ ವಿಶೇಷ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ ನಾಡಿನ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಿಮ್ಮೆಲ್ಲರ ಸಹಕಾರ ನಿರಂತರವಾಗಿರಲಿ ಎಂದು ನಾಡಿನ ಜನತೆಯಲ್ಲಿ ಸಿಎಂ ಮನವಿ ಮಾಡಿದ್ದಾರೆ.

ನಾಡಿನ ಎಲ್ಲಾ ಅರ್ಹ ಕುಟುಂಬಗಳಿಗೆ ಯೋಜನೆಯ ಲಾಭ ತಲುಪಿಸಿ, ಬಡಜನರಿಗೂ ಸ್ವಾವಲಂಬಿ ಬದುಕು ಕಟ್ಟಿಕೊಡಬೇಕು ಎಂಬ ನಮ್ಮ ಆಶಯಕ್ಕೆ ನಿಮ್ಮ ಬೆಂಬಲವಿರಲಿ. ನಮ್ಮ ಮೊದಲ ‘100 ದಿನಗಳ’ ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ. ಗ್ಯಾರಂಟಿಗಳ ಈಡೇರಿಕೆಯ ಜೊತೆಗೆ ಅಭಿವೃದ್ಧಿಯ ರಥವನ್ನು ಮುನ್ನಡೆಸುತ್ತಿರುವ ನಮ್ಮೊಂದಿಗೆ ನಿಮ್ಮೆಲ್ಲರ ಸಹಕಾರವಿರಲಿ ಎಂದು ಕೋರಿದ್ದಾರೆ.

 ಪ್ರತಿ ವ್ಯಕ್ತಿಗೆ ತಲಾ 10 ಕೆ.ಜಿ ಅಕ್ಕಿ

ಹಸಿವುಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪದೊಂದಿಗೆ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯಡಿ ನಾಡಿನ 1.28 ಕೋಟಿ ಬಡ ಕುಟುಂಬಗಳ ಪ್ರತಿ ವ್ಯಕ್ತಿಗೆ ತಲಾ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲು ಉದ್ದೇಶಿಸಲಾಗಿದೆ. ಸದ್ಯ ಪೂರ್ಣ ಪ್ರಮಾಣದಲ್ಲಿ ಅಕ್ಕಿಯ ಲಭ್ಯತೆಯಿಲ್ಲದ ಕಾರಣಕ್ಕೆ ತಲಾ 5 ಕೆ.ಜಿ ಅಕ್ಕಿ ಹಾಗೂ ಇನ್ನುಳಿದ 5 ಕೆ.ಜಿ ಅಕ್ಕಿಯ ಬದಲಿಗೆ ರೂ.170 ಅನ್ನು ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ. ನಮ್ಮ ಮೊದಲ ‘100 ದಿನಗಳ’ ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ ಎಂದಿದ್ದಾರೆ.

ಬೆಲೆಯೇರಿಕೆಯ ಕತ್ತಲು ಸರಿಸಿ ಭರವಸೆಯ ಬೆಳಕು ಹರಿಸುವ ಆಶಯದೊಂದಿಗೆ ನಾವು ಜಾರಿಗೆ ತಂದಿರುವ “ಗೃಹಜ್ಯೋತಿ” ಯೋಜನೆಯಡಿ ನಾಡಿನ ಗೃಹಬಳಕೆದಾರರಿಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ಅನ್ನು ನೀಡಲಾಗುತ್ತಿದೆ. ಈಗಾಗಲೇ 1.48 ಕೋಟಿ ಕುಟುಂಬಗಳು ಯಶಸ್ವಿಯಾಗಿ ನೋಂದಣಿ ಮಾಡಿಕೊಳ್ಳುವ ಮೂಲಕ ಯೋಜನೆಯ ಲಾಭ ಪಡೆಯುತ್ತಿವೆ. ನಮ್ಮ ಮೊದಲ ‘100 ದಿನಗಳ’ ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ. ಗ್ಯಾರಂಟಿಗಳ ಈಡೇರಿಕೆಯ ಜೊತೆಗೆ ಅಭಿವೃದ್ಧಿಯ ರಥವನ್ನು ಮುನ್ನಡೆಸುತ್ತಿರುವ ನಮ್ಮೊಂದಿಗೆ ನಿಮ್ಮೆಲ್ಲರ ಸಹಕಾರವಿರಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ