Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಅಮಿತ್ ಶಾ ವಿರುದ್ದ ಕಾಂಗ್ರೆಸ್ ಬೃಹತ್ ಪ್ರತಿಭಟನೆ : ಶಾ ಪ್ರತಿಕೃತಿ ದಹನ

ಮಳವಳ್ಳಿ ಪಟ್ಟಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮತ್ತು ಸಿ.ಟಿ ರವಿ ವಿರುದ್ದ ಕಾಂಗ್ರೆಸ್ ನ ನೂರಾರು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಪ್ರತಿಮೆಯಿಂದ ಹೊರಟ ಪ್ರತಿಭಟನಾಕಾರರು ಅಮಿತ್ ಶಾ ಹಾಗೂ ಸಿ.ಟಿ ರವಿ ವಿರುದ್ದ ದಿಕ್ಕಾರ ಕೂಗುತ್ತಾ ಪ್ರಮುಖ ಬೀದಿಗಳ ಮೂಲಕ ಅನಂತ ರಾಂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲ ನಿಮಿಷ ರಸ್ತೆತಡೆ ನಡೆಸಲಾಯಿತು. ಇದೇ ವೇಳೆ ಅಮಿತ್ ಶಾ ಭಾವಚಿತ್ರವಿರುವ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಮನ್ ಮುಲ್ ನಿರ್ದೇಶಕ ಆರ್.ಎನ್ ವಿಶ್ವಾಸ್ ಮಾತನಾಡಿ, ಸಂಸತ್‌ನಲ್ಲಿ ಮಾತನಾಡುವ ವೇಳೆ ಅಂಬೇಡ್ಕರ್ ಅವರ ಹೆಸರನ್ನು ಪ್ರಸ್ತಾಪಿಸಿ ಅಪಮಾನ ಮಾಡಿರುವುದು ನಿಜವಾದ ದೇಶದ್ರೋಹದ ಕೃತ್ಯ. ಇಂತಹ ಕೀಳುಮಟ್ಟದ ಅಭಿರುಚಿವುಳ್ಳ ವ್ಯಕ್ತಿ ದೇಶದ ಗೃಹ ಸಚಿವ ಆಗಿರುವುದು ದುರಂತ ಅಂಬೇಡ್ಕರ್ ಅವರನ್ನು ಇಡೀ ವಿಶ್ವವೇ ಪ್ರತಿನಿತ್ಯವೂ ಸ್ಮರಿಸುತ್ತದೆ. ಅವರು ನೀಡಿರುವ ಸಂವಿಧಾನವನ್ನು ಎಲ್ಲರೂ ಸ್ಮರಿಸುತ್ತಾರೆ. ಆದರೆ, ದೇಶದ ಆಡಳಿತ ನಡೆಸುತ್ತಿರುವ ಕೋಮುವಾದಿಗಳು ಅವರನ್ನೇ ಅಪಮಾನ ಮಾಡುತ್ತಿದ್ಧಾರೆ’ ಎಂದು ಹೇಳಿದರು.

ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸಿ.ಮಾದು ಮಾತನಾಡಿ ಸರ್ಕಾರ ಸಂವಿಧಾನವನ್ನೇ ಮಾರ್ಗದರ್ಶಿ ಸೂತ್ರವಾಗಿಟ್ಟುಕೊಂಡು ದೇಶವನ್ನು ಆಳುತ್ತಿದೆ. ಹೆಣ್ಣನ್ನು ಗೌರವಿಸುವುದು ಭಾರತೀಯ ಸಂಸ್ಕೃತಿಯ ಮೂಲಭೂತ ಭಾಗವಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹಿಳೆಯರಿಗೆ ಆಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಮಾನ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ಸಿ.ಟಿ ರವಿ ಅವರ ಸದಸ್ಯತ್ವವನ್ನು ವಜಾಗೊಳಿಸುವಂತೆ ರಾಜ್ಯಪಾಲರನ್ನು ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ಬಳಿಕ ತಹಸೀಲ್ದಾರ್ ಕಚೇರಿಗೆ ತೆರಳಿ ಅಮಿತ್ ಶಾ ರವರನ್ನು ಸಂಪುಟದಿಂದ ವಜಾಗೊಳಿಸಿ ಹಾಗೂ ಸಿ ಟಿ ರವಿ ವಿರುದ್ದ ಕಾನೂನು ಕ್ರಮ ಕೈ ಗೊಳ್ಳುವಂತೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಿಕ್ಕಲಿಂಗಯ್ಯ, ತಾ. ಅದ್ಯಕ್ಷ ಮಹದೇವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ, ಸಿ.ಪಿ ರಾಜು, ಪುರಸಭೆ ಸದಸ್ಯರಾದ ಶಿವಸ್ವಾಮಿ.ಪ್ರಮೀಳಾ. ಬಸವರಾಜು. ಅಯ್ಯುಬ್ ಪಾಷಾ.ಬಸವರಾಜು. ಆನಂದ್ ಮುಖಂಡರಾದ ದೇವರಾಜು, ಕೆಂಪಯ್ಯಸಾಗ್ಯ, ಕಿರಣ್ ಶಂಕರ್, ಪುಟ್ಟಸ್ವಾಮಿ. ಕಿರಣ್ ನಾಯಕ್. ಶಾಂತರಾಜು ಸೇರಿದಂತೆ ಹಲವರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ