Wednesday, September 18, 2024

ಪ್ರಾಯೋಗಿಕ ಆವೃತ್ತಿ

ಜನತಾದಳ ಹೆಸರನ್ನು “ಕಮಲ ದಳ” ಎಂದು ಬದಲಿಸಿಕೊಂಡರೆ ಒಳಿತು!- ಕಾಂಗ್ರೆಸ್ ವ್ಯಂಗ್ಯ

ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು, ಆದರೆ ಈಗ “ಜಾತ್ಯಾತೀತತೆ”ಯನ್ನು ವಿಸರ್ಜಿಸಲು ಹೊರಟಿದ್ದಾರೆ, ಜನತಾದಳ ಎಂಬ ಹೆಸರನ್ನು “ಕಮಲ ದಳ” ಎಂದು ಬದಲಿಸಿಕೊಂಡರೆ ಒಳಿತು! ಎಂದು ಜೆಡಿಎಸ್ ನಾಯಕರ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿದೆ.

“>

ಇತ್ತ ಬಿಜೆಪಿ, ಜೆಡಿಎಸ್ ಪಕ್ಷವನ್ನು ಫ್ಯಾಮಿಲಿ ಪಾರ್ಟಿ ಟೀಕಿಸುತ್ತಿತ್ತು, ಈಗ ಅದೇ ಫ್ಯಾಮಿಲಿಗೆ ನಾಲ್ಕು ಸೀಟು ಬಿಟ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು ಅಲ್ಲವೇ ಎಂದು ಸಾಮಾಜಿಕ ಮಾಧ್ಯಮ ‘ಎಕ್ಸ್’ ನಲ್ಲಿ ಟೀಕಿಸಿದೆ.

ಬಿಜೆಪಿ, ಜೆಡಿಎಸ್ ಮೈತ್ರಿ ಹೇಗಿದೆ ಅಂದರೆ ನಡು ನೀರಲ್ಲಿ ಮುಳುಗುತ್ತಿರುವ ಇಬ್ಬರು ಒಬ್ಬರನೊಬ್ಬರು ಕೈ ಹಿಡಿದು ಆಸರೆ ಪಡೆಯುವಂತೆ..! ಪರಸ್ಪರ ಕೈ ಹಿಡಿದು ಇಬ್ಬರೂ ಮುಳುಗಿ ತಳ ಸೇರುವುದು ಖಂಡಿತ. ಮುಳುಗುವವರು ಹುಲ್ಲು ಕಡ್ಡಿಯ ಆಸರೆಯನ್ನಾದರೂ ಪಡೆಯಬೇಕು, ಅದು ಬಿಟ್ಟು ಮತ್ತೊಬ್ಬ ಮುಳುಗುತ್ತಿರುವವರ ಆಸರೆ ಪಡೆದರೆ ಬದುಕಲು ಸಾಧ್ಯವೇ?! ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!