Sunday, May 19, 2024

ಪ್ರಾಯೋಗಿಕ ಆವೃತ್ತಿ

ನಾಯಕತ್ವವಿಲ್ಲದ ಬಿಜೆಪಿ, ಜೆಡಿಎಸ್ ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದೆ ; ಕಾಂಗ್ರೆಸ್ ವ್ಯಂಗ್ಯ

ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು “ಕುರುಡನ ಹೆಗಲ ಮೇಲೆ ಕುಂಟನ ಸವಾರಿ”ಯಂತಿದೆ! ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

“>

ನಾಯಕತ್ವವಿಲ್ಲದ ಬಿಜೆಪಿ ಜೆಡಿಎಸ್ ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು. ಇತ್ತ ಜೆಡಿಎಸ್ ಕೋಮುವಾದಿಗಳ ಸಂಘ ಮಾಡಿದ್ದು ಮತಿಗೇಡಿತನ ಎಂದು ಟೀಕಿಸಿದೆ.

ಹೊಸ ರಾಜಕೀಯ ಸಮ್ಮಿಶ್ರಣವೊಂದು ತಯಾರಾಗುತ್ತಿದೆ. ಈಗ ನಮಗಿರುವ ಪ್ರಶ್ನೆ, ಜೆಡಿಎಸ್ ಕೋಮುವಾದವನ್ನು ಅಳವಡಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತದೆಯೇ? ಬೆಳವಣಿಗೆಗಳನ್ನು ನೋಡುತ್ತಿದ್ದರೆ ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ, ಥೇಟ್. ನಾಗವಲ್ಲಿಯ ತರ!! ಎಂದು ಲೇವಡಿ ಮಾಡಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!