ಸರ್ವಧರ್ಮವನ್ನು ಸಮಾನಾಗಿ ಕಂಡು ಸಮುದಾಯದ ಶ್ರೇಯೋಭಿವೃದ್ದಿಗಾಗಿ ಶ್ರಮಿಸುವಲ್ಲಿ ಕಾಂಗ್ರೆಸ್ ಪಕ್ಷ ಬದ್ದವಾಗಿದೆ ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.
ಮಳವಳ್ಳಿ ತಾಲೂಕಿನ ಹಲಗೂರು ದನಗೂರು, ಬೆಳಕವಾಡಿ ಮಳವಳ್ಳಿ ಟೌನ್, ಕಿರುಗಾವಲು, ಕಲ್ಕುಣಿ ಗ್ರಾಮದ ಮುಸ್ಲಿಂ ಬ್ಲಾಕ್ ನಲ್ಲಿ ಚರಂಡಿ ಹಾಗೂ ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ 5 ಕೋಟಿ ರೂ ಅನುದಾನ ಬಿಡುಗಡೆಗೊಂಡಿದ್ದು, ತಾಲ್ಲೂಕಿನಲ್ಲಿರುವ ಅಲ್ಪಸಂಖ್ಯಾತರ ಕಾಲೋನಿಗಳ ಚರಂಡಿ ಹಾಗೂ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ದಿಗೊಳಿಸಲಾಗುತ್ತಿದೆ ಎಂದರು.
ಸಕಾ೯ರದಿಂದ ವಿಶೇಷ ಅನುದಾನವನ್ನು ತಂದು ಎಲ್ಲಾ ಸಮುದಾಯದ ಬೀದಿಗಳ ರಸ್ತೆ ಮತ್ತು ಚರಂಡಿಗಳನ್ನು ಸಮಗ್ರವಾಗಿ ಅಭಿವೃದ್ದಿಗೊಳಿಲಾಗುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ಕಾಣುತ್ತಿದೆ. ತಾಲ್ಲೂಕು ಆಸ್ಪತ್ರೆಗೆ ಹೊಸ ತಂತ್ರಜ್ಞಾನ ಒಳಗೊಂಡ ಶಸ್ತ್ರಚಿಕಿತ್ಸೆಕೊಠಡಿಗಳು, ಎಲ್ಲಾ ಮಾದರಿ ರಕ್ತ ಪರೀಕ್ಷೆ, ಡಯಾಲೀಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದ್ದು ,ಸಾವ೯ಜನಿಕರು ಸಮಪ೯ಕವಾಗಿ ಬಳಸಿಕೊಳ್ಳಬೆಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ, ಸಿಪಿ ರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಅಂಬರೀಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಸುಜಾತ ಕೆ ಪುಟ್ಟು, ಪುರಸಭೆ ಸದಸ್ಯ ನೂರುಲ್ಲಾ ಮತ್ತಿತರರು ಉಪಸ್ಥಿತರಿದ್ದರು.




