Sunday, November 22, 2026

ಪ್ರಾಯೋಗಿಕ ಆವೃತ್ತಿ

ಒಳಮೀಸಲಾತಿ ಜಾರಿ ಮಾಡದೇ ಕಾಂಗ್ರೆಸ್ ಸರ್ಕಾರ ನಾಟಕವಾಡುತ್ತಿದೆ ; ಎಚ್.ಹನುಮಂತಪ್ಪ

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವು ಒಳಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದು ಒಳಮೀಸಲಾತಿ ಜಾರಿಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಚ್.ಹನುಮಂತಪ್ಪ ಬಳ್ಳಾರಿ ಆರೋಪಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ಜಾರಿ ಮಾಡಲು ರಾಜ್ಯ ಸರಕಾರಗಳಿಗೆ ಅಧಿಕಾರ ಇದೆ ಎಂದು ಸುಪ್ರೀ ಕೋರ್ಟ್ ೨೦೨೪ರ ಆಗಸ್ಟ್‌ನಲ್ಲಿಯೇ ಆದೇಶ ನೀಡಿದೆ. ಆದರೆ ಕಾಂಗ್ರೆಸ್ ಸರಕಾರ ಯಾರ ಒತ್ತಡಕ್ಕೆ ಮಣಿದು ಒಳಮೀಸಲಾತಿ ಜಾರಿ ಮಾಡದೇ ನಾಟಕವಾಡುತ್ತಿದೆ ಎಂಬುದು ತಿಳಿಸಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಕಾಂಗ್ರೆಸ್ ಸರಕಾರದ ಬಳಿ ೩ ಆಯೋಗಗಳ ವರದಿಯಿದೆ. ಈ ಸಂಬಂಧ ಸದನದಲ್ಲಿ ಹಾಗೂ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿ, ರಾಜ್ಯಪಾಲರ ಅಂಕಿತ ಪಡೆದರೂ ಯಾವ ಕಾರಣಕ್ಕೆ ತಡೆಹಿಡಿಸಿದ್ದೀರಿ. ನಾಗಮೋಹನ್ ದಾಸ್ ಅವರ ವರದಿ ಪ್ರಕಾರ ಒಳ ಮೀಸಲಾತಿ ಜಾರಿ ಮಾಡದೇ ರಾಜಕೀಯ ಲಾಭಕ್ಕಾಗಿ ೩ ಗುಂಪು ಮಾಡಿ ಬೇಕಾಬಿಟ್ಟಿಯಾಗಿ ಜಾರಿ ಮಾಡಿದೆ ಎಂದು ದೂರಿದರು.

ನೆರೆ ರಾಜ್ಯ ತಮಿಳುನಾಡಿನಲ್ಲಿ ಶೇ.೫೯ ರಷ್ಟು, ಪಂಚಾಬ್‌ನಲ್ಲಿ ಶೇ.೫೬, ಹರಿಯಾಣದಲ್ಲಿ ಶೇ.೫೮ರಷ್ಟು ಮೀಸಲಾತಿಯಿದೆ. ಆದರೆ ನಮ್ಮ ರಾಜದಲ್ಲಿ ಶೇ.೫೬ರಷ್ಟು ಮೀಸಲಾತಿ ಜಾರಿ ಮಾಡಲು ಏನು ಅಡ್ಡಿ ಎಂದು ಪ್ರಶ್ನಿಸಿದ ಅವರು, ೨೦೧೯ ಚುನಾವಣೆ ಸಂದರ್ಭದಲ್ಲಿ ಸದಾಶಿವ ಆಯೋಗದ ವರದಿ ಜಾರಿ ಮಾಡದ್ದೇ ಸೋಲಿಗೆ ಕಾರಣ ಎಂದು ಒಪ್ಪಿಕೊಂಡಿದ್ದೀರಿ. ಮತ್ತೇ ಕಾಂಗ್ರೆಸ್‌ಗೆ ಶೋಷಿತ ಸಮುದಾಯಗಳು ನಿಮಗೆ ತಕ್ಕ ಪಾಠ ಕಲಿಸಲಿದೆ. ಸದ್ಯದಲ್ಲಿ ನಡೆಯುವ ಉಪಚುನಾವಣೆಯಲ್ಲೂ ಕಾಂಗ್ರೆಸ್ ಸೋಲಿಸುತ್ತೇವೆ ಎಂದು ಎಚ್ಚರಿಸಿದರು.

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಹಿರಿಯೂರಿನ ಆದಿಜಾಂಭವ ಮಠದ ಪೀಠಾಧಿಪತಿ ಶ್ರೀಷಡಕ್ಷರಮುನಿ ಸ್ವಾಮೀಜಿ ನೇತೃತ್ವದಲ್ಲಿ ಹರಿಹರದಿಂದ ಪಾದಯಾತ್ರೆ ನಡೆಯುತ್ತಿದ್ದೆ. ಮಾ.೨೭ರಂದು ಬೆಂಗಳೂರು ತಲುಪಲಿದೆ. ಅಂದು ನಡೆಯುವ ಸಭೆಯಲ್ಲಿ ರಾಜ್ಯಾದ್ಯಂತ ಇರುವ ಮಾದಿಗ ಸಮುದಾಯದ ಹೋರಾಟಗಾರರು ಭಾಗವಹಿಸಿ ಸರಕಾರವನ್ನು ಎಚ್ಚರಿಸುವಂತೆ ಮನವಿ ಮಾಡಿದರು.

ಗೋಷ್ಟಿಯಲ್ಲಿ ಹುಬ್ಬಳ್ಳಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಸಿ.ಕೆ.ಪಾಪಯ್ಯ, ಶಿವಶರಣ ಮಾದರ ಚನ್ನಯ್ಯ ಸೇವಾ ಸಮಿತಿ ಅಧ್ಯಕ್ಷ ಕೃಷ್ಣ, ನಾಗೇಂದ್ರ, ಪ್ರಸನ್ನ ಚಕ್ರವರ್ತಿ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ