Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್-ಜೆಡಿಎಸ್ ಧೂಳೀಪಟ: ಬಿ.ಸೋಮಶೇಖರ್

ಗುಜರಾತ್ ಫಲಿತಾಂಶವನ್ನು ನೋಡಿದರೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಧೂಳೀಪಟವಾಗುವುದು ನಿಶ್ಚಿತ ಎಂದು ಮಾಜಿ ಸಚಿವ ಬಿ.ಸೋಮಶೇಖರ್ ವಾಗ್ದಾಳಿ ನಡೆಸಿದರು.

ಮಳವಳ್ಳಿ ಪಟ್ಟಣದ ರಾವಣಿ ರಸ್ತೆಯಲ್ಲಿರುವ ನವೀಕೃತ ಬಿಜೆಪಿ ಕಚೇರಿಯನ್ನು ಮಾಜಿ ಸಚಿವ ಬಿ. ಸೋಮಶೇಖರ್ ಉದ್ಘಾಟಿಸಿ ಮಾತನಾಡಿದರು.

ಗುಜರಾತ್ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷ ಬಿಜೆಪಿ ಬಗ್ಗೆ ಮಾಡಿದ ಅಪಪ್ರಚಾರಕ್ಕೆ ಗುಜಾರಾತಿನ ಜನರು ದಾಖಲೆಯ ಗೆಲುವಿನ ಮೂಲಕ ಉತ್ತರ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ನಾನು ಶಾಸಕನಾಗದಿದ್ದರೂ ತಾಲ್ಲೂಕಿನ ರಸ್ತೆ ಹಾಗೂ ನೀರಾವರಿ ಅಭಿವೃದ್ಧಿ ಕಾಮಗಾರಿಗೆ 50 ಕೋಟಿ ರೂ. ಮತ್ತು ಪೊಲೀಸ್ ಠಾಣೆಯ ನಿರ್ಮಾಣಕ್ಕೆ ಕೋಟ್ಯಾಂತರ ರೂ.ಅನುದಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನ ಸೆಳೆದು ಬಿಡುಗಡೆ ಮಾಡಿಸಿರುವುದಾಗಿ ಹೇಳಿದರು.

ಶಾಸಕ ಡಾ.ಕೆ.ಅನ್ನದಾನಿ ಅವರ ಮನೆ ದೇವರ ದೇವಸ್ಥಾನದ ರಸ್ತೆಯನ್ನು ಕಳೆದ ಐದು ವರ್ಷಗಳಿಂದ ಅಭಿವೃದ್ಧಿ ಪಡಿಸಲು ಸಾಧ್ಯವಾಗಿರಲಿಲ್ಲ.ಅವರು 50 ಕೋಟಿ ರೂ. ಅನುದಾನವನ್ನು ನನ್ನದು ಎಂದು ಹೇಳಿಕೊಳ್ಳಬಹುದು. ಕಾರ್ಯಕರ್ತರು ಜಾಗೃತರಾಗಬೇಕೆಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.

ಶಾಸಕ ಡಾ.ಕೆ.ಅನ್ನದಾನಿ ಹಾಗೂ ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಅವರ ಅವಧಿಯಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ.

ಕಳೆದ 20 ವರ್ಷಗಳಿಂದ ಕ್ಷೇತ್ರದಲ್ಲಿ ಹಾಲಿ ಮತ್ತು ಮಾಜಿ ಶಾಸಕರು ತಾಲ್ಲೂಕಿನ ಅಭಿವೃದ್ಧಿಯನ್ನು ಕಡೆಗಣಿಸಿದ್ದು, ನನ್ನ ಅವಧಿಯಲ್ಲಿ ನೀರಾವರಿ ಹಾಗೂ ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಿರುವೆ, ಹೀಗಾಗಿ ಜನರು ಮತ್ತೆ ನನ್ನ ಬಗ್ಗೆ ಒಲವು ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಮಧು ಗಂಗಾಧರ್, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಲಿಂಗರಾಜು, ಮುಖಂಡರಾದ ಅನಿಲ್, ಜಯರಾಮು, ಹಳದಾಸನಹಳ್ಳಿ ಶಿವಣ್ಣ ಮತ್ತಿತರರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!