Thursday, September 19, 2024

ಪ್ರಾಯೋಗಿಕ ಆವೃತ್ತಿ

ಎಐಸಿಸಿ ನಾಯಕಿ ಪ್ರಿಯಾಂಕಗಾಂಧಿಗೆ ಅದ್ದೂರಿ ಸ್ವಾಗತ

‘ನಾ ನಾಯಕಿ’ ಮಹಿಳಾ ಸಮಾವೇಶಕ್ಕಾಗಿ ಬೆಂಗಳೂರಿಗೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಗಾಂಧಿ ಅವರನ್ನು ಕರ್ನಾಟಕ ಕಾಂಗ್ರೆಸ್ ಬೃಹತ್ ಗಾತ್ರದ ಸೇಬಿನ ಹಾರ ಹಾಕುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿತು.

ಪ್ರಿಯಾಂಕಗಾಂಧಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬೃಹತ್ ಹಾರದ ಮೂಲಕ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅವರು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ನಾ ನಾಯಕಿ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಮಹಿಳೆಯರು ಸೇರಿದ್ದು, ಬೆಂಗಳೂರು ಅರಮನೆ ಮೈದಾನ ಸಂಪೂರ್ಣ ಮಹಿಳೆಯರಿಂದಲೇ ಕಿಕ್ಕಿರಿದು ತುಂಬಿರುವ ದೃಶ್ಯ ಕಂಡು ಬಂತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!