ಲೋಕಸಭಾ ಚುನಾವಣೆಗೆ ಇನ್ನೂ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರ ಬೀಳಲಿದ್ದು, ಈ ನಡುವೆ ಕರ್ನಾಟಕ ರಾಜ್ಯ 28 ಕ್ಷೇತ್ರಗಳ ಪೈಕಿ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ.
ಮಂಡ್ಯ ಲೋಕಸಭಾ ಕ್ಷೇತ್ರ ನೀರಿಕ್ಷೆಯಂತೆಯೇ ಉದ್ಯಮಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಕಣಕ್ಕಿಳಿಸಲಾಗಿದೆ. ಸ್ಟಾರ್ ಚಂದ್ರ ಪ್ರಥಮ ದರ್ಜೆ ಗುತ್ತಿಗೆದಾರರಾಗಿದ್ದುಕೊಂಡು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಸ್ಟಾರ್ ಚಂದ್ರು ಅವರ ಸಹೋದರ ಪ್ರಸ್ತುತ ಗೌರಿ ಬಿದನೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಆಯ್ಕೆಯಾಗಿ ಶಾಸಕರಾಗಿದ್ಧಾರೆ.

ಇನ್ನೂ ಉಳಿದಂತೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ನೀರಿಕ್ಷೆಯಂತೆ ಡಿ.ಕೆ.ಸುರೇಶ್, ಶಿವಮೊಗ್ಗಕ್ಕೆ ಚಿತ್ರ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್, ಹಾಸನಕ್ಕೆ ಶ್ರೇಯಶ್ ಪಟೇಲ್, ತುಮಕೂರಿಗೆ ಎಸ್.ಪಿ.ಮುದ್ದಹನುಮೇಗೌಡ, ವಿಜಯಪುರಕ್ಕೆ ರಾಜು ಹಲಗೂರ ಹಾಗೂ ಹಾವೇರಿ ಕ್ಷೇತ್ರಕ್ಕೆ ಆನಂದಸ್ವಾಮಿ ಗಡ್ಡದೇವರಮಠ ಅವರ ಹೆಸರನ್ನು ಪ್ರಕಟಿಸಲಾಗಿದೆ.




