Friday, October 25, 2024

ಪ್ರಾಯೋಗಿಕ ಆವೃತ್ತಿ

ಚುನಾವಣಾ ಫಲಿತಾಂಶ| ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ಎನ್‌ಸಿ ಮುನ್ನಡೆ, ಹರಿಯಾಣದಲ್ಲಿ ಬಿಜೆಪಿ ಮುನ್ನಡೆ

ಜಮ್ಮು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಎರಡೂ ರಾಜ್ಯಗಳಲ್ಲಿ ಇಂಡಿಯಾ ಒಕ್ಕೂಟ ಆರಂಭಿಕ ಮುನ್ನಡೆ ಕಂಡುಕೊಂಡಿತ್ತು, ಆದರೆ ನಂತರ ಮತ ಏಳಿಕೆಯಲ್ಲಿ ಹರಿಯಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸುಮಾರು 56 ಸ್ಥಾನಗಳಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿ ಮೈತ್ರಿ ಮುನ್ನಡೆ ಸಾಧಿಸಿದೆ, ಬಿಜೆಪಿ 28 ಸ್ಥಾನಗಳಲ್ಲಿ, ಪಿಡಿಪಿ 7 ಹಾಗೂ ಇತರೆ 2 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಜಮ್ಮು ಕಾಶ್ಮೀರದ ವಿಧಾನಭೆಯ 90 ಚುನಾಯಿತ ಸ್ಥಾನಗಳ ಪೈಕಿ ಬಹುಮತಕ್ಕೆ 46 ಸ್ಥಾನಗಳನ್ನು ಪಡೆಯಬೇಕಿದೆ.

ಹರಿಯಾಣದಲ್ಲಿ ಕಾಂಗ್ರೆಸ್ 35 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 49, ಐಎನ್‌ಡಿ ಪಕ್ಷ 4, ಐಎಲ್ಎನ್’ಡಿ-1, ಬಿಎಸ್ಪಿ 1 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ/

ಹರಿಯಾಣ ವಿಧಾನಸಭೆಯ 90 ಸ್ಥಾನಗಳ ಪೈಕಿ ಬಹುಮತಕ್ಕೆ 46ಸ್ಥಾನಗಳ ಅಗತ್ಯವಿದೆ. ಪ್ರಸ್ತುತ ಬಿಜೆಪಿ ಮ್ಯಾಜಿಕ್ ನಂಬರ್ ದಾಟಿ ಭಾರೀ ಮುನ್ನಡೆ ಸಾಧಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!