Monday, May 20, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಪಕ್ಷದ 124 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಮಳವಳ್ಳಿ, ಶ್ರೀರಂಗಪಟ್ಟಣ, ನಾಗಮಂಗಲ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಕಾಂಗ್ರೆಸ್ ಪಕ್ಷ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಪಕ್ಷದ ಚುನಾವಣಾ ಉಸ್ತುವಾರಿ ಮುಕುಲ್ ವಾಸ್ನಿಕ್ ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ಹಲವು ಅಚ್ಚರಿಯ ಅಭ್ಯರ್ಥಿಗಳು ಸ್ಥಾನ ಪಡೆದಿದ್ದಾರೆ.ನಂಜನಗೂಡು ಮೀಸಲು ಕ್ಷೇತ್ರದಿಂದ ದರ್ಶನ್ ಧ್ರುವನಾರಾಯಣ್, ದೇವನಹಳ್ಳಿ ಮೀಸಲು ಕ್ಷೇತ್ರದಿಂದ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ,ಬೆಂಗಳೂರಿನ ರಾಜಾಜಿನಗರ ಕ್ಷೇತ್ರದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಪುಟ್ಟಣ್ಣ ಅಭ್ಯರ್ಥಿಯಾಗಿರುವುದು ವಿಶೇಷ.

ಕ್ಷೇತ್ರ ಹುಡುಕಾಟದ ಗೊಂದಲದಲ್ಲಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರದಿಂದ ಅಭ್ಯರ್ಥಿಯಾಗಿದ್ದು, ಎಚ್‌.ಸಿ. ಮಹದೇವಪ್ಪ ಅವರಿಗೆ ಟಿ. ನರಸೀಪುರದಿಂದ ಕಣಕ್ಕಿಳಿಸಲಾಗಿದೆ.

ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಗಮಂಗಲದಿಂದ ಎನ್. ಚಲುವರಾಯಸ್ವಾಮಿ, ಮಳವಳ್ಳಿಯಿಂದ ಪಿ.ಎಂ. ನರೇಂದ್ರಸ್ವಾಮಿ, ಶ್ರೀರಂಗಪಟ್ಟಣದಿಂದ ರಮೇಶ್ ಬಾಬು ಬಂಡಿಸಿದ್ದೇಗೌಡ ಅಭ್ಯರ್ಥಿ ಯಾಗಿದ್ದಾರೆ. ಮಂಡ್ಯ, ಕೆ.ಆರ್. ಪೇಟೆ,ಮದ್ದೂರು, ಮೇಲುಕೋಟೆ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕನಕಪುರದಿಂದ, ರಾಮನಗರದಿಂದ ಇಕ್ಬಾಲ್ ಹುಸೇನ್, ಮಾಗಡಿಯಿಂದ ಎಚ್.ಸಿ. ಬಾಲಕೃಷ್ಣ ಕಣಕ್ಕಿಳಿಯಲಿದ್ದಾರೆ. ದಾವಣಗೆರೆ ದಕ್ಷಿಣದಿಂದ 92 ವರ್ಷ ವಯಸ್ಸಿನ ಶಾಮನೂರು ಶಿವಶಂಕರಪ್ಪ, ದಾವಣಗೆರೆ ಉತ್ತರದಿಂದ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಕಣಕ್ಕಿಳಿಯಲಿದ್ದಾರೆ. ಬಿಟಿಎಂ ಲೇಔಟ್ ನಿಂದ ರಾಮಲಿಂಗಾರೆಡ್ಡಿ ಹಾಗೂ ಜಯನಗರದಿಂದ ಅವರ ಪುತ್ರಿ ಸೌಮ್ಯಾ ರೆಡ್ಡಿ ಕಣಕ್ಕಿಳಿಯಲಿದ್ದಾರೆ.

ಯಮಕನಮರಡಿ (ಎಸ್ಟಿ) ಕ್ಷೇತ್ರದಿಂದ ಸತೀಶ್ ಜಾರಕಿಹೊಳಿ,ಬಬಲೇಶ್ವರದಿಂದ ಎಂ.ಬಿ.ಪಾಟೀಲ್,ಬೀದರ್ ದಕ್ಷಿಣದಲ್ಲಿ ಅಶೋಕ್ ಖೇಣಿ ಅಭ್ಯರ್ಥಿಯಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಪಟ್ಟಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!