Monday, May 6, 2024

ಪ್ರಾಯೋಗಿಕ ಆವೃತ್ತಿ

ಭಾರತ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿಗೆ ಯತ್ನ: ಮಂಡ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಭಾರತ ಜೋಡೋ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಅಸ್ಸಾಂನಲ್ಲಿ ಹಲ್ಲೆ ನಡೆಸಲು ಯತ್ನಿಸಿದ್ದನ್ನು ಖಂಡಿಸಿ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.

ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಉದ್ಯಾನದವರೆಗೂ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಅಸ್ಸಾಂ ಬಿಜೆಪಿ ಸರ್ಕಾರ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕಪಡಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಕಾಂಗ್ರೆಸ್ ಮಹಿಳಾ ಅಧ್ಯಕ್ಷ ಅಂಜನಾ ಶ್ರೀಕಾಂತ್, ಕಾರ್ಯಧ್ಯಕ್ಷ ಚಿದಂಬರ್, ಕುರುಬರ ಸಂಘದ ಅಧ್ಯಕ್ಷ ಸುರೇಶ್, ಸೋನಿಯಾ ಗಾಂಧಿ ಯುವ ಬ್ರಿಗೇಡ್ ಅಧ್ಯಕ್ಷ ವೀಣಾ ಶಂಕರ್, ನಗರಸಭೆ ಸದಸ್ಯ ಶ್ರೀಧರ್, ಬ್ಲಾಕ್ ಕಾಂಗ್ರೆಸ್ ಮುಖಂಡರಾದ ರುದ್ರಪ್ಪ, ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಕನ್ನಲಿ ಚನ್ನಪ್ಪ, ನವೀನ್, ಶಕುಂತಲಾ, ಪ್ರಶಾಂತ್ ಬಾಬು, ವೆಂಕಟೇಶ್, ಅನಿಲ್ ಹಾಗೂ ಇನ್ನಿತರ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!