Monday, November 23, 2026

ಪ್ರಾಯೋಗಿಕ ಆವೃತ್ತಿ

ಮತಗಳ್ಳತನ | ನಾಳೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮತ ಕಳ್ಳತನದ ವಿರುದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆ.8ರಂದು ಶುಕ್ರವಾರ ಪ್ರತಿಭಟನೆ ನಡೆಯಲಿದೆ.

2024ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರಿನ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿದೆ ಎಂದು ಆರೋಪ ಕೇಳಿ ಬಂದಿದೆ.

ಆಗಸ್ಟ್ 8ರಂದು ವರಮಹಾಲಕ್ಷ್ಮಿ ಹಬ್ಬ ಇದೆ. ಆದರೆ, ನಾವು ಪಕ್ಷದ ಕಾರ್ಯಕ್ರಮ ನಡೆಸಬೇಕಾಗಿದೆ. ಎಲ್ಲಾ ಸಚಿವರು, ಕಾಂಗ್ರೆಸ್ ಶಾಸಕರು ಮತ್ತು ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರಿನ ಮಹದೇವಪುರ ಮತ್ತು ರಾಜಾಜಿನಗರದಲ್ಲಿ
ಮತಗಳ್ಳತನ ಆಗಿರುವ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 31ರಂದು ಹೇಳಿದ್ದರು.

ಇದಕ್ಕೂ ಮುನ್ನ, ಜುಲೈ 24ರಂದು ಸಂಸತ್ತಿನ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ರಾಹುಲ್ ಗಾಂಧಿ ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲಿ ‘ಭಾರೀ ಮತ ಕಳ್ಳತನ’ ನಡೆದಿದೆ ಎಂಬ ಗಂಭೀರ ಆರೋಪ ಮಾಡಿದ್ದರು. ಈ ಅಕ್ರಮದ ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಚುನಾವಣಾ ಆಯೋಗ ಮತ್ತು ಸಾರ್ವಜನಿಕರ ಮುಂದೆ ಬಹಿರಂಗಪಡಿಸುವುದಾಗಿ ಹೇಳಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ