Thursday, July 25, 2024

ಪ್ರಾಯೋಗಿಕ ಆವೃತ್ತಿ

ನೀಟ್ ಅಕ್ರಮ| ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಸಂಘಟಿತ ಭ್ರಷ್ಟಾಚಾರ; ಜೂ.21ಕ್ಕೆ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ನೀಟ್‌ ಯುಜಿ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಘಟಕಗಳು ಜೂನ್‌ 21ರಂದು ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

“ತಾಂತ್ರಿಕ ದೋಷಗಳು, ಅಕ್ರಮಗಳು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪರೀಕ್ಷೆಯು ನಲುಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅಕ್ರಮಗಳು ಬೆಳಕಿಗೆ ಬಂದಿದ್ದು, ಬಿಹಾರ, ಗುಜರಾತ್ ಹಾಗೂ ಹರಿಯಾಣ ಕೇಂದ್ರಗಳಿಂದ ಸಂಘಟಿತ ಅಪರಾಧ ನಡೆದಿರುವುದು ಸ್ಪಷ್ಟವಾಗಿದೆ” ಎಂದು ವೇಣುಗೋಪಾಲ್‌ ತಿಳಿಸಿದ್ದಾರೆ.

“ಈ ಅಕ್ರಮಗಳನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ನಿರ್ಲಕ್ಷ್ಯತೆಯನ್ನು ಕೊನೆಗಾಣಿಸುವಂತೆ ಸೂಚನೆ ನೀಡಿದೆ. ಇಂತಹ ಅಕ್ರಮಗಳು ಪರೀಕ್ಷೆಯ ಪಾರದರ್ಶಕತೆಯ ಮೇಲೆ ಪರಿಣಾಮ ಬೀರಲಿದ್ದು, ಭವಿಷ್ಯದಲ್ಲಿ ಅಸಂಖ್ಯಾತ ನಿಷ್ಠಾವಂತ ವಿದ್ಯಾರ್ಥಿಗಳನ್ನು ಅಪಾಯಕ್ಕೆ ಸಿಲುಕಿಸುತ್ತದೆ. ನಮ್ಮ ಪ್ರಣಾಳಿಕೆಯು ಪ್ರಶ್ನೆ ಪತ್ರಿಕೆಯ ಸೋರಿಕೆಯ ವಿರುದ್ಧ ಕಠಿಣ ಕ್ರಮ ಕೈಗೊಂಡು ಯುವಕರ ಭವಿಷ್ಯವನ್ನು ರಕ್ಷಿಸಲು ಭರವಸೆ ನೀಡುತ್ತದೆ” ಎಂದು ವೇಣುಗೋಪಾಲ್ ಹೇಳಿದರು.

ನೀಟ್‌ ಪರೀಕ್ಷೆಯಲ್ಲಿನ ಬೃಹತ್‌ ಭ್ರಷ್ಟಾಚಾರ, ಅಕ್ರಮಗಳು ಹಾಗೂ ಯಾವುದೇ ಕ್ರಮ ಕೈಗೊಳ್ಳದೆ ಮೌನವಾಗಿರುವ ಎನ್‌ಡಿಎ ಸರ್ಕಾರದ ವಿರುದ್ಧ ಎಲ್ಲ ಪ್ರದೇಶ ಕಾಂಗ್ರೆಸ್ ಸಮಿತಿಗಳು ತಮ್ಮ ರಾಜ್ಯಗಳ ಮುಖ್ಯ ಕಚೇರಿಗಳಲ್ಲಿ ಜೂನ್‌ 21 ರಂದು ಪಕ್ಷದ ಹಿರಿಯ ನಾಯರೊಂದಿಗೆ ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಬೃಹತ್‌ ಪ್ರತಿಭಟನೆ ನಡೆಸುವಂತೆ ಮನವಿ ಮಾಡಲಾಗಿದೆ” ಎಂದು ವೇಣುಗೋಪಾಲ್‌ ತಿಳಿಸಿದ್ದಾರೆ.

ಮೇ 5 ರಂದು ಹಮ್ಮಿಕೊಳ್ಳಲಾಗಿದ್ದ ನೀಟ್‌ ಪರೀಕ್ಷೆಯಲ್ಲಿ ದೇಶಾದ್ಯಂತ 571 ಕೇಂದ್ರಗಳಲ್ಲಿ 24 ಲಕ್ಷಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಎನ್‌ಟಿಎ ಇತಿಹಾಸದಲ್ಲಿಯೆ ಮೊದಲ ಬಾರಿಗೆ 67ಕ್ಕೂ ಹೆಚ್ಚು ವಿದ್ಯಾರ್ಥಿಗಳು 720 ಕ್ಕೆ 720 ಅಂಕ ಪಡೆದುಕೊಂಡಿದ್ದರು. ಈ ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಹರಿಯಾಣದ ಫರಿದಾಬಾದ್‌ ಪರೀಕ್ಷಾ ಕೇಂದ್ರದಲ್ಲಿ ಬರೆದ ವಿದ್ಯಾರ್ಥಿಗಳಾಗಿದ್ದರು.

ಪ್ರಶ್ನೆಪತ್ರಿಕೆ ಸೋರಿಕೆ, ಇತರೆ ಆರೋಪಿಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯವು ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಎನ್‌ಟಿಎಗೆ ನಿರ್ದೇಶಿಸಿದೆ. ಇದಕ್ಕೂ ಮೊದಲು 10 ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜುಲೈ 8 ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಈ ನಡುವೆ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನಿಡಲಾಗಿದ್ದ ಕೃಪಾಂಕವನ್ನು ಎನ್‌ಟಿಎ ರದ್ದುಗೊಳಿಸಿ, ಮರು ಪರೀಕ್ಷೆಯನ್ನು ಕೈಗೊಳ್ಳಲು ತೀರ್ಮಾನಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!