Thursday, November 19, 2026

ಪ್ರಾಯೋಗಿಕ ಆವೃತ್ತಿ

ದಾಳಿ ಮುಂದವರಿಸಿದರೆ ಆರ್‌ಎಸ್‌ಎಸ್‌ ವಿರುದ್ದ ಪ್ರತಿಭಟನೆ : ಸಿ.ಡಿ.ಗಂಗಾಧರ್

ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗೆ ನಿರ್ಬಂಧ ಹೇರುವಂತೆ ಸಿಎಂಗೆ ಪತ್ರ ಬರೆದಿದ್ದಾರೆ, ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನವರು ಸಂಘಟನೆಯನ್ನೇ ನಿಷೇಧಿಸಿ ಎಂದು ಹೇಳಿದ್ದಾರೆಂದು ಬಿಂಬಿಸಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿರುವ ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅವರು ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರ ವರ್ತನೆ ಇದೇ ರೀತಿ ಮುಂದುವರೆಸಿದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಮುಖಂಡರು ಪ್ರಾಣ ಬೆದರಿಕೆವೊಡ್ಡುತ್ತಿರುವುದು, ಅವರ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ. ಸಚಿವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ನಿರಂತರವಾಗಿ ಬೆದರಿಕೆ ನೀಡುವ ಕರೆಗಳು ಬರುತ್ತಿರುವುದು ಖಂಡನೀಯ ಎಂದು ಕಿಡಿಕಾರಿದರು.

ಒಂದು ವಿಷಯದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವ ಸಾಂವಿಧಾನಿಕ ಅಭಿವ್ಯಕ್ತಿ ಸ್ವಾತಂತ್ರ್ಯ ಹಕ್ಕಿನ ಮೇಲೆ ದಾಳಿ ನಡೆಸುತ್ತಿವೆ. ಈ ಮೂಲಕ ಸಂವಿಧಾನ ವಿರೋಧಿ ಕ್ರಮವನ್ನು ಅನುಸರಿಸುತ್ತಿವೆ. ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ತೊಂದರೆಯಾದರೆ ಆರ್‌ಎಸ್‌ಎಸ್‌ನ ಕಾರ್ಯಕರ್ತರು ಸರಕಾರದ ಎದುರು ಮನವಿ ಮಾಡುತ್ತಾರೆ. ಆದನ್ನು ಬಿಟ್ಟು ಆರ್‌ಎಸ್‌ಎಸ್ ಪರವಾಗಿ ಬಿಜೆಪಿ ಮುಖಂಡರು ವಿನಃ ಕಾರಣ ಹೇಳಿಕೆಗಳನ್ನು ಏಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಗೋಷ್ಠಿಯಲ್ಲಿ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ವಿಜಯಲಕ್ಷ್ಮಿ ರಘುನಂದನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾತ್, ಎಸ್ಸಿ/ಎಸ್ಟಿ ವಿಭಾಗದ ಜಿಲ್ಲಾ ಉಪಾಧ್ಯಕ್ಷ ವಿಜಯ್‌ಕುಮಾರ್, ಕಾಂಗ್ರೆಸ್ ಜಿಲ್ಲಾ ವಕ್ತಾರ ಸಿ.ಎಂ.ದ್ಯಾವಪ್ಪ, ಎಂ.ಪಿ.ಮಂಜುನಾಥ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ