Friday, November 20, 2026

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್‌ ಆಡಳಿತ ಬಯಸಿದ ನಾಗರಿಕರು : ಶಾಸಕ ದಿನೇಶ್‌ ಗೂಳಿಗೌಡ

  • ಶೇಕಡಾ 82 ಮತದಾನಕ್ಕೆ ಶಾಸಕರ ಹರ್ಷ
  • ಮಂಡ್ಯದಲ್ಲಿ ಏಳಕ್ಕೆ ಏಳೂ ಕ್ಷೇತ್ರವೂ ಕಾಂಗ್ರೆಸ್‌ ಪಾಲು

ಪ್ರಸಕ್ತ ಸಾಲಿನ ವಿಧಾನಸಭಾ ಚುನಾವಣೆಗೆ ಮತದಾನ ಮುಕ್ತಾಯವಾಗಿದೆ. ಈ ಬಾರಿ ಮಂಡ್ಯ ಜಿಲ್ಲೆಯಲ್ಲಿ ಶೇಕಡಾ 82ರಷ್ಟು ಮತದಾನವಾಗಿದೆ. ಈ ಮೂಲಕ ಮತದಾರರು ಭಾರಿ ಹುಮ್ಮಸ್ಸಿನಿಂದ ಮತ ಚಲಾಯಿಸಿದ್ದಾರೆ. ಈ ಪ್ರಮಾಣದ ಮತದಾನವನ್ನು ನೋಡಿದರೆ ಇದು ಆಡಳಿತ ವಿರೋಧಿ ಅಲೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ಹಾಗಾಗಿ ಮಂಡ್ಯ ಜಿಲ್ಲೆಯಲ್ಲಿ ಏಳಕ್ಕೆ ಏಳೂ ಕ್ಷೇತ್ರವನ್ನೂ ಕಾಂಗ್ರೆಸ್‌ ಗೆಲ್ಲಲಿದೆ.

ಜನರು ಈ ಬಾರಿ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎಂಬುದು ಜನ ಬೆಂಬಲಿದಿಂದ ಗೊತ್ತಾಗುತ್ತದೆ. ಇನ್ನು ರಾಜ್ಯದಲ್ಲಿ ಕಾಂಗ್ರೆಸ್‌ ಕನಿಷ್ಠ 140 ಸ್ಥಾನಗಳನ್ನು ಪಡೆದು ಪೂರ್ಣ ಬಹುಮತದಿಂದ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲಿದೆ. ಈ ಹಿನ್ನೆಲೆಯಲ್ಲಿ ಮತದಾರ ಪ್ರಭುಗಳಿಗೆ ಧನ್ಯವಾದವನ್ನು ಅರ್ಪಿಸುತ್ತೇನೆ ಎಂದು ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್‌ ಗೂಳಿಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಾರಿಯ ಚುನಾವಣೋತ್ತರ ಸಮೀಕ್ಷೆ ಸಹ ಕಾಂಗ್ರೆಸ್‌ ಜಯಭೇರಿ ಭಾರಿಸಲಿದೆ ಎಂಬುದನ್ನು ಸ್ಪಷ್ಟವಾಗಿ ಹೇಳಿದೆ. ಇನ್ನು ಇದಕ್ಕೆ ಕಾರಣವೂ ಇದ್ದು, ಬಡವರ, ದೀನದಲಿತರ ಪರವಾಗಿ ಕಾಂಗ್ರೆಸ್‌ ನಿಂತಿರುವುದು ಎಂಬುದು ಸಹ ಅಷ್ಟೇ ಸತ್ಯವಾಗಿದೆ.

ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ 2000 ರೂಪಾಯಿ ಪ್ರೋತ್ಸಾಹಧನ, 200 ಯೂನಿಟ್‌ ಉಚಿತ ವಿದ್ಯುತ್‌, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ, ನಿರೋದ್ಯೋಗಿ ಯುವಕರಿಗೆ 3 ಸಾವಿರ ಪ್ರೋತ್ಸಾಹಧನ, ಬಡವರಿಗೆ 10 ಕೆಜಿ ಅಕ್ಕಿ ಸೇರಿದಂತೆ ಇನ್ನಿತರ ಜನಪರ ಕಾರ್ಯಕ್ರಮವನ್ನು ಕಾಂಗ್ರೆಸ್‌ ಘೋಷಿಸಿದೆ. ಇದು ಕಾಂಗ್ರೆಸ್‌ನತ್ತ ಜನರು ಬರಲು ಕಾರಣವಾಗಿದೆ. ಮತದಾನ ಮಾಡಿದ ಎಲ್ಲ ಮತದಾರ ಪ್ರಭುಗಳಿಗೆ ನಾನು ಧನ್ಯವಾದವನ್ನು ಅರ್ಪಿಸುತ್ತೇನೆ ಎಂದು ಶಾಸಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ