Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮಣಿಪುರ ಸರ್ಕಾರ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ

ಮಣಿಪುರದಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿರುವ ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತ್ರತ್ವದ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು, ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತೆಯರು ಶುಕ್ರವಾರ ಮಂಡ್ಯ ನಗರದ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಮೌನ ಪ್ರತಿಭಟನೆ ನಡೆಸಿದರು.

ಕಳೆದ ಮೂರು ತಿಂಗಳಿಂದ ಮಣಿಪುರದಲ್ಲಿ ಜನಾಂಗೀಯ ಘರ್ಷಣೆ ನಡೆದು ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದೆ. ಮಹಿಳೆಯರ ಮೇಲೆ ದೌರ್ಜನ್ಯದ ಜೊತೆಗೆ ಸಾಮೂಹಿಕ ಅತ್ಯಾಚಾರ, ಬೆತ್ತಲೆ ಮೆರವಣಿಗೆ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ, ಹಿಂಸಾಚಾರದ ಹಿಂದೆ ಕಾಣದ ಕೈಗಳ ಕೈವಾಡ ಇದ್ದು, ಪಟ್ಟಭದ್ರರು ಕುಕಿ ಸಮುದಾಯವನ್ನು ಗುರಿಯಾಗಿಸಿ ದೌರ್ಜನ್ಯ ನಡೆಸುತ್ತಿದ್ದಾರೆ ಆದರೂ ಸಹ ಅಲ್ಲಿನ ಸರ್ಕಾರ ನಿರ್ಲಕ್ಷ್ಯವಹಿಸಿದೆ ಎಂದು ಆರೋಪಿಸಿದರು.

ಮಣಿಪುರದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿದ್ದಾರೆ, ಮಹಿಳೆಯರ ಗೌರವ, ಘನತೆಯ ರಕ್ಷಣೆಗೆ ಮುಂದಾಗದಿರುವುದು ಪ್ರಧಾನಿಯವರಿಗೆ ಗೌರವ ತರುವುದಿಲ್ಲ, ಕೂಡಲೇ ಅವರು ತುರ್ತು ಕ್ರಮ ವಹಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಮಂಡ್ಯ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಸಿ.ಎಂ.ದ್ಯಾವಪ್ಪ, ಒಬಿಸಿ ಘಟಕದ ಅಧ್ಯಕ್ಷ ಕೃಷ್ಣ, ಮುಖಂಡ ಕೊತ್ತತ್ತಿ ಸಿದ್ದಪ್ಪ, ನಗರಸಭೆ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ ರಘು ನಂದನ್, ವೀಣಾ ಶಂಕರ್, ಮಮತಾ, ಜಯಲಕ್ಷ್ಮಿ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!