ಜಿಲ್ಲೆ,ರಾಜ್ಯ ಮತ್ತು ರಾಷ್ಟ್ರ ಮಟ್ಟದ ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಯ ಉದ್ದೇಶದಿಂದ ಯಂಗ್ ಇಂಡಿಯಾ ಬೋಲೋ ಕಾರ್ಯಕ್ರಮದ ಭಾಗವಾಗಿ ಭಾಷಣ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಜಯಕುಮಾರ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹಾಗೂ ರಾಜ್ಯಾಧ್ಯಕ್ಷ ಮುಹಮ್ಮದ್ ಹ್ಯಾರಿಸ್ ನಲಪಾಡ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಐಶ್ವರ್ಯ ಮಹದೇವ್ ಹಾಗೂ ಹರ್ಷವರ್ಧನ್ ಅವರ ನೇತೃತ್ವದಲ್ಲಿ ರಾಜ್ಯದ ಯುವಜನತೆ ರಾಜಕೀಯ ಪ್ರವೇಶ ಮಾಡಿ ಜನಪರ ಧ್ವನಿಯಾಗಲು ಕಾಂಗ್ರೆಸ್ ಪಕ್ಷ ಈ ವೇದಿಕೆ ಕಲ್ಪಿಸಿದೆ.ಆಸಕ್ತಿ ಉಳ್ಳವರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಕೋರಿದರು.
ಮಂಡ್ಯ ಜಿಲ್ಲೆಯ ಯುವಕ-ಯುವತಿಯರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು,ರಾಷ್ಟ್ರದ ಹಿತದೃಷ್ಟಿಯಿಂದ ಸ್ಪರ್ಧೆಯಲ್ಲಿ ಭಾಗವಹಿಸಬೇಕು.ಭಾಷಣ ಸ್ಪರ್ಧೆಯಲ್ಲಿ ಪ್ರಚಲಿತ ವಿದ್ಯಮಾನಗಳ ಕುರಿತು ವಿಷಯ ಮಂಡಿಸಬಹುದು.ವಿಷಯದ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಎಚ್ಟಿಟಿಪಿಎಸ್ ಮೊದಲನೇ ಬಹುಮಾನವಾಗಿ ಐಫೋನ್ 13 ಪ್ರೊ ಮೊಬೈಲ್ ಪೋನ್ ನೀಡಲಾಗುವುದು.ಎರಡನೇ ಬಹುಮಾನವಾಗಿ ಐಪೋನ್ 13 ಹಾಗೂ ಮೂರನೇ ಬಹುಮಾನವಾಗಿ ಒನ್ ಪ್ಲಸ್ ಮೊಬೈಲ್ ಫೋನ್ ನೀಡಲಾಗುವುದು ಎಂದರು.
ಹೆಚ್ಚಿನ ಮಾಹಿತಿಗಾಗಿ ಹರ್ಷವರ್ಧನ್ ಮೊ. 9164660404 ಹಾಗೂ ವಿಜಯ್ ಮಾರ್ ಹೆಚ್.ಬಿ ಮೊ.9886820704 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಶ್ಮಿ ಶಿವಕುಮಾರ್,ಉಪಾಧ್ಯಕ್ಷ ರಾಜೇಶ್, ನಗರಸಭಾ ಸದಸ್ಯ ನಯೀಂ, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಸುನಿಲ್, ನಿತಿನ್, ಹಿತೇಶ್ ಉಪಸ್ಥಿತರಿದ್ದರು.