Saturday, May 18, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಕಹಳೆ| ಕೇಂದ್ರದ ಬರ ತಾರತಮ್ಯದ ವಿರುದ್ದ’ಕೈ’ ಪ್ರತಿಭಟನಾಸ್ತ್ರ

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟಿಸಿತು.

ವಿಧಾನಸೌಧ ಗಾಂಧಿ ಪ್ರತಿಮೆ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ ಸುರ್ಜೇವಾಲ, ಸಚಿವರಾದ ಕೃಷ್ಣಬೈರೇಗೌಡ, ರಾಮಲಿಂಗಾರೆಡ್ಡಿ ಸೇರಿದಂತೆ ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ಇದೆ. ಕೇಂದ್ರ ಸರ್ಕಾರ ಮೊದಲು ಬರ ಪರಿಹಾರ ನೀಡಿದ ಬಳಿಕ ಅಮಿತ್ ಶಾ ರಾಜ್ಯ ಪ್ರಚಾರಕ್ಕೆ ಆಗಮಿಲಿ” ಎಂದು ಆಗ್ರಹಿಸಿದರು.

“ಅಮಿತ್ ಶಾ ಅವರಿಗೆ ಕರ್ನಾಟಕದಲ್ಲಿ ಓಟ್ ಕೇಳುವ ನೈತಿಕತೆ ಇಲ್ಲ. ದ್ರದ ಮಲತಾಯಿ ಧೋರಣೆ ವಿರೋಧಿಸಿ ಸಾಂಕೇತಿಕ ಪ್ರತಿಭಟನೆ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಕರ್ನಾಟಕ ಹಾಗೂ ಕರ್ನಾಟಕದ ರೈತರನ್ನು ದ್ವೇಷ ಮಾಡುತ್ತಾರೆ. ಕರ್ನಾಟಕಕ್ಕೆ ನ್ಯಾಯ ಕೊಡಿ ಎಂಬ ಬೇಡಿಕೆಗೆ ಸ್ಪಂದಿಸಿಲ್ಲ. ಈ ಕಾರಣಕ್ಕಾಗಿ ಪ್ರತಿಭಟನೆ ಮಾಡಿದ್ದೇವೆ” ಎಂದರು.

“ಬರದಿಂದಾಗಿ 48,000 ಹೆಕ್ಟೇರ್ ಬೆಳೆ ನಷ್ಟವಾಗಿದೆ. ರೈತರಿಗೆ ಮೊದಲು ಕಂತು ಎರಡು ಸಾವಿರ ಬಿಡುಗಡೆ ಮಾಡಿದ್ದೆವು. ರೂ.650 ಕೋಟಿ ಬಿಡುಗಡೆ ಮಾಡಿ ರೈತರಿಗೆ ತಲುಪಿಸುವ ಪ್ರಯತ್ನ ಮಾಡಿದ್ದೇವೆ. ನಾವು ಬರಗಾಲವನ್ನು ಸಮರ್ಥವಾಗಿ ಎದುರಿಸಿದ್ದೇವೆ. ರೂ. 18,170 ಕೋಟಿ ಪರಿಹಾರಕ್ಕೆ ಮನವಿ ಸಲ್ಲಿಕೆ ಮಾಡಿದ್ದೇವೆ. ಮನವಿ ಮಾಡಿದ್ದೇವೆ. ಆದರೆ ಇವತ್ತಿನವರೆಗೆ ಕೇಂದ್ರ ಸರ್ಕಾರ ಒಂದು ರೂಪಾಯಿ ಕೊಟ್ಟಿಲ್ಲ” ಎಂದು ಕಿಡಿಕಾರಿದರು.

“ಬರ ಪರಿಹಾರಕ್ಕೆ ಸೆಪ್ಟೆಂಬರ್ ನಲ್ಲಿ ಮನವಿ ಸಲ್ಲಿಕೆ ಮಾಡಿದ್ದೇವೆ. ಕೇಂದ್ರ ತಂಡ ಪರಿಶೀಲನೆ ಮಾಡಿ ವರದಿ ಕೊಟ್ಟಿದ್ದಾರೆ.‌ ಕರ್ನಾಟಕದಲ್ಲಿ ಭೀಕರ ಬರಗಾಲ ಇದೆ. ಆದರೆ ಅಮಿತ್ ಶಾ ಅವರು ಕರ್ನಾಟಕ ಸರ್ಕಾರ ಮನವಿ ವಿಳಂಬವಾಗಿ ನೀಡಿದರು ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗೆ ದುಡ್ಡು ಕೇಳ್ತಿದ್ದಾರೆ ಬರಗಾಲಕ್ಕೆ ಅಲ್ಲ ಎಂದು ನಿರ್ಮಲಾ ಹೇಳಿದ್ದಾರೆ. ಗ್ಯಾರಂಟಿಗೆ ನಮ್ಮ ರಾಜ್ಯದ ಸಂಪನ್ಮೂಲಗಳಿಂದ ಕೊಟ್ಟಿದ್ದೇವೆ” ಎಂದರು.

“ಕರ್ನಾಟಕಕ್ಕೆ ಬರಲು ಯಾವುದೇ ನೈತಿಕತೆ ಇಲ್ಲ,ಯಾವ ಮುಖ ಹೊತ್ತು ಬರ್ತಿದ್ದೀರಿ? ಬಜೆಟ್ ನಲ್ಲಿ ಭದ್ರಾ ಮೇಲ್ಡಂಡೆ ಯೋಜನೆಗೆ ರೂ.5300 ಬಿಡುಗಡೆ ಮಾಡುತ್ತೇವೆ, ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುತ್ತೇವೆ ಎಂದಿದ್ದಾರೆ. ಆದರೆ ಈವರೆಗೂ ಈಡೇರಿಸಿಲ್ಲ” ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!