Saturday, May 18, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ವರಿಷ್ಠರ ನಿರ್ಧಾರಕ್ಕೆ ಬದ್ಧ : ಮಲ್ಲಾಜಮ್ಮ

2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದು,
ಕಾಂಗ್ರೆಸ್ ವರಿಷ್ಠರ ನಿರ್ಧಾರಕ್ಕೆ ಬದ್ದವಾಗಿರುತ್ತೇನೆ ಎಂದು ಮಾಜಿ ಶಾಸಕಿ ಮಲ್ಲಾಜಮ್ಮ ತಿಳಿಸಿದರು.

ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,
ವರಿಷ್ಠರು ಯಾರಿಗಾದರೂ ಬಿ.ಫಾರಂ ನೀಡಲಿ, ಎಲ್ಲಾ ಮುಖಂಡರು ಒಗ್ಗಟ್ಟಾಗಿ ಶ್ರಮಿಸಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದೆಂದು ತಿಳಿಸಿದರು.

ನಾನೂ ಸಹ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಅರ್ಜಿ ಹಾಕಿದ್ದೇನೆ. ಆದರೆ ವರಿಷ್ಠರ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಮಳವಳ್ಳಿಯಲ್ಲಿ ಯಾವುದೇ ಬಣಗಳಿಲ್ಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆ.ಪಿ.ಸಿ.ಸಿ ಅಧ್ಯಕ್ಷ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಆಶಯವಾಗಿದೆ ಎಂದರು.

ಬಿಜೆಪಿ ಸರ್ಕಾರದ ದುರಾಡಳಿತದಿಂದಾಗಿ ಜನ ಸಾಮಾನ್ಯರು ಬದುಕುವುದೇ ಕಷ್ಟವಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕೆಂದು ರಾಜ್ಯದ ಜನರು ಬಯಸುತ್ತಿದ್ದಾರೆ. ಮುಂದಿನ ಭಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.

ಮುಖಂಡರಾದ ಕಗ್ಗಲಿಪುರ ಕೆಂಪರಾಜು, ಗಂಗಾಧರ್. ಬಾಣಸಮುದ್ರ ಬಸವರಾಜು, ನಂಜುಂಡೇಗೌಡ, ಮಹದೇವಪ್ಪ ಸೇರಿದಂತೆ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!