Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಅಲೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಲುವರಾಯಸ್ವಾಮಿ

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ನಾಮಪತ್ರ ಸಲ್ಲಿಸುವ ದಿನವೇ ಫಲಿತಾಂಶದ ಚಿತ್ರಣ ಸಿಗಬೇಕು. ಕಾಂಗ್ರೆಸ್  ಅಲೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂಬುದನ್ನು ಜಿಲ್ಲೆಯ ಜನತೆ ರುಜುವಾತು ಮಾಡಬೇಕೆಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದರು.

ಮದ್ದೂರು ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಮಾಡಿದರೆ ಅವರು ಅಭ್ಯರ್ಥಿ ಆಯ್ಕೆಗೆ ಒಂದು ತಿಂಗಳಿಂದ ಡ್ರಾಮ ಮಾಡುತ್ತಿದ್ದಾರೆ ಎಂದರು.

ಈಗ ಇಲ್ಲಿಗೆ ಬರ್ತಿದ್ದಾರೆ

ರಾಮನಗರ, ಕನಕಪುರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಆಯ್ತು ಈಗ ಇಲ್ಲಿಗೆ ಬರ್ತಿದ್ದಾರೆ. ಮೂರು ಮುಖ್ಯಮಂತ್ರಿಗಳನ್ನು ಕೊಟ್ಟ ರಾಮನಗರ ಜಿಲ್ಲೆಯನ್ನು ಬಿಟ್ಟು ಇಲ್ಲಿಗೆ ಬರುತ್ತಿದ್ದಾರೆ. ಯಾರೇ ಬರಲಿ “ನಮ್ಮ ಜಿಲ್ಲೆ ನಮ್ಮ ಹೆಮ್ಮೆ”ಯನ್ನು ಮರೆಯಬೇಡಿ. ಹೊರಗಡೆಯಿಂದ ಬಂದವರು ಇಲ್ಲಿ ಓಡಾಡಿಲ್ಲ. ನಾಯಕತ್ವ ಮಂಡ್ಯದೇ ಇರಬೇಕು ಎಂದರು.

ತಾಲೂಕಿನಲ್ಲಿ ಜೆಡಿಎಸ್ ಸೊಲಿಸಲು ಸಾಧ್ಯವಿಲ್ಲ ಎಂದಿದ್ದರು. ಆದರೆ ತಾಲೂಕಿನ ಜನ 24 ಸಾವಿರ ಲೀಡ್ ನಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸಿ ಉದಯ್ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಿದರು. ಲೋಕಸಭಾ ಚುನಾವಣೆಯಲ್ಲಿ ಸಹ ಇದೇ ರೀತಿ ಲೀಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಬಹುಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಕಳೆದ 10 ತಿಂಗಳಲ್ಲಿ 36 ಸಾವಿರ ಕೋಟಿ ರೂ.ಗಳಷ್ಟು ಹಣವನ್ನು ಎಲ್ಲರ ಮನೆಗೆ ತಲುಪಿಸಿದ್ದೇವೆ. ಪ್ರತಿ ಮನೆಗೆ ತಿಂಗಳಿಂದ 4-5 ಸಾವಿರ ತಲುಪುತ್ತಿದೆ. ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದು ಸಹಕಾರಿಯಾಗಲಿದೆ. ಗ್ಯಾರಂಟಿ ಯೋಜನೆಗಳಿಗಾಗಿ ‌ಬಜೆಟ್ ನಲ್ಲಿ 60 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಬರ ಪರಿಸ್ಥಿತಿಯಿದ್ದರೂ ಕೇಂದ್ರ ಸರ್ಕಾರ ಬಿಡುಗಾಸನ್ನೂ ಬಿಡುಗಡೆ ಮಾಡಿಲ್ಲ. ಆದರೂ ನಮ್ಮ ಸರ್ಕಾರ 35 ಲಕ್ಷ ರೈತರಿಗೆ ಎರಡು ಸಾವಿರ ಹಣ ನೀಡಿದೆ ಎಂದರು.

ಸಭೆಯಲ್ಲಿ ಶಾಸಕರಾದ ನರೇಂದ್ರಸ್ವಾಮಿ, ಉದಯ್, ವಿಧಾನಪರಿಷತ್ ಸದಸ್ಯರಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ, ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಮಾಜಿ ಶಾಸಕರಾದ ಮರಿತಿಬ್ಬೇಗೌಡ, ರಾಮಕೃಷ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಡಿ.ಗಂಗಾಧರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅಂಜನಾ ಶ್ರೀಕಾಂತ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ, ಕೆಎಂಎಫ್ ನಿರ್ದೇಶಕ ಹರೀಶ್ ಬಾಬು, ಬಸವರಾಜ್, ರಾಜೀವ್ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!