Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮುಂದುವರೆದ ಮಂಡ್ಯ ‘ಕೈ’ ನಾಯಕರ ‘ದಿಲ್ಲಿ ಪಾಲಿಟಿಕ್ಸ್’

ಮಂಡ್ಯದ ಕಾಂಗ್ರೆಸ್ ಮುಖಂಡರು ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಇಂದು ನವದೆಹಲಿಯಲ್ಲಿ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಯುವ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ತಿನ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯ ಜಿ.ಪರಮೇಶ್ವರ್ ಅವರನ್ನು ಮುಖಂಡರು ಭೇಟಿ ಮಾಡಿದರು.

ಮಂಡ್ಯ ಕಾಂಗ್ರೆಸ್ ಮುಖಂಡರ ಭೇಟಿ ಪ್ರಸ್ತುತ ಮಂಡ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯುವಂತೆ ಮಾಡಿತು. ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಕಾಂಗ್ರೆಸ್ ಮುಖಂಡರು ವರಿಷ್ಠರಿಗೆ ಮನವಿ ಮಾಡಿದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ