Thursday, September 19, 2024

ಪ್ರಾಯೋಗಿಕ ಆವೃತ್ತಿ

ಅಪಾಯದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ : ವಿಚಾರ ಸಂಕಿರಣ

ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರವರ 131ನೇ ಜಯಂತೋತ್ಸವ ಮತ್ತು ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿರುವ ಕುರಿತು ರಾಜ್ಯಾದಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ, ಅದರ ಭಾಗವಾಗಿ ಮಂಡ್ಯದ ಗಾಂಧಿ ಭವನದಲ್ಲಿ ಇದೇ 15ರ ಭಾನುವಾರದಂದು ಹಮ್ಮಿಕೊಂಡಿದ್ದೇವೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಹಚ್.ಪಿ. ಜವರಯ್ಯ ನವರು ಮಂಡ್ಯದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಕಾಯFಕ್ರಮದ ಅಧ್ಯಕ್ಷತೆಯನ್ನು ಮೇಲುಕೋಟೆಯ ಶಾಸಕರಾದ ಸಿ.ಎಸ್.ಪುಟ್ಟರಾಜುರವರು ವಹಿಸಲಿದ್ದು, ಉದ್ಘಾಟನೆಯನ್ನು ಮಳವಳ್ಳಿ ಕ್ಷೇತ್ರದ ಶಾಸಕರಾದ ಡಾ.ಕೆ.ಅನ್ನದಾನಿ ಮಾಡಲಿದ್ದು, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಮಾಜ ಸೇವಕರಾದ ಕೆ.ಕೆ.ರಾಧಕೃಷ್ಣ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

ನೆಚ್ಚಿನ ನಾಯಕರಾದ ಎಂ.ಬಿ.ಶ್ರೀನಿವಾಸ್ ರವರ 61ನೇ ಜನ್ಮದಿನದ ಪ್ರಯುಕ್ತ ಬಡ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಿದ್ದು, ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಕಾಂಗ್ರೇಸ್ ಮುಖಂಡರಾದ ರವಿಕುಮಾರ್ ಗಣಿಗರವರು ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

ಈ ಕಾರ್ಯಕ್ರಮದ ವಿಚಾರ ಮಂಡನೆಯನ್ನು ಅಂಬೇಡ್ಕರ್ ವಿಚಾರವಾದಿಗಳಾದ ಮಹೇಶ್ ಚಂದ್ರಗುರು ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷರಾದ ಹೆಚ್.ಎಸ್.ಮಂಜು, ರೈತ ಸಂಘದ ಮಹಿಳಾ ನಾಯಕರಾದ ಸುನಂದ ಜಯರಾಂ, ಮಾಜಿ ನಗರ ಸಭೆಯ ಅಧ್ಯಕ್ಷರಾದ ಎಂ.ಪಿ.ಅರುಣ್ ಕುಮಾರ್, ಶೋಭ ಶ್ರೀನಿವಾಸ್ ಸಾಮಾಜಿಕ ನ್ಯಾಯ ಸಮಿತಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಹಳೇಬೀಡು, ಎಂ.ಕೆ. ಕೃಷ್ಣರವರು, ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೆ.ಎನ್. ನವೀನ್ ಕುಮಾರ್ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಈ ಕಾರ್ಯಕ್ರಮಕ್ಕೆ ಸಾರ್ವಜನಿಕ ಬಂಧುಗಳು, ಎಂ.ಬಿ.ಶ್ರೀನಿವಾಸ್ ರವರ ಆಭಿಮಾನಿಗಳು, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಎಲ್ಲಾ ಕಾರ್ಯಕರ್ತರು ಬಂದು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಮುಖಂಡರಾದ ಎಂ.ವಿ. ಕೃಷ್ಣರವರು ಮಾತನಾಡುತ್ತ ಇಂದು ಬಿಜೆಪಿ ಸರ್ಕಾರ ಒಂದಲ್ಲ ಒಂದು ರೀತಿಯಲ್ಲಿ ಹಿಂದುಳಿದ ವರ್ಗದವರಿಗೆ, ದಲಿತರಿಗೆ, ಅಲ್ಪ ಸಂಖ್ಯಾತರಿಗೆ ಮಾರಕವಾದ ಕಾನೂನುಗಳನ್ನು ಜಾರಿ ಮಾಡುತ್ತ, ಜಾತಿ ಮತ್ತು ಧರ್ಮಗಳ ಹೆಸರಿನಲ್ಲಿ ಜನರ ಭಾವನೆಗಳನ್ನು ಕೆರಳಿಸುವ ವ್ಯವಸ್ಥಿತ ಪಿತೂರಿ ಮಾಡುತ್ತಿದೆ ಎಂದರು.

ಡಾ.ಬಾಬಾ ಸಾಹೇಬ ಅಂಬೇಡ್ಕರ್ ರವರ ಆಶಯಗಳನ್ನು ವ್ಯವಸ್ಥಿತವಾಗಿ ಧೂಳಿಪಟ ಮಾಡುತ್ತಿರುವ ಸಂಚನ್ನು ವಿರೋಧಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ, ಬಾಬಾ ಸಾಹೇಬ ಅಂಬೇಡ್ಕರ್ ರವರ ಅಲೋಚೆಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಸಂಘಟನೆ ವತಿಯಿಂದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿರುವ ವಿಚಾರವನ್ನು ಇಟ್ಟುಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿಚಾರ ಗೋಷ್ಠಿಯನ್ನು ಆಯೋಜನೆ ಮಾಡಲಾಗಿದೆ. ಈ ವಿಚಾರ ಸಂಕಿರಣಕ್ಕೆ ಜಿಲ್ಲೆಯ ಜನತೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

ಸುದ್ಧಿಗೋಷ್ಠಿಯಲ್ಲಿ ತಾಲೂಕು ಸಂಚಾಲಕ ಎಂ.ಕೆ.ಕಷ್ಣಪ್ಪ, ಕಾರ್ಯಕಾರಿ ಸಂಚಾಲಕರಾದ ಹೆಚ್.ಪಿ. ಅಪ್ಪಜಪ್ಪ, ನಗರ ಸಂಘಟನಾ ಸಂಚಾಲಕರಾದ ಶಶಿಕುಮಾರ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!