Friday, September 20, 2024

ಪ್ರಾಯೋಗಿಕ ಆವೃತ್ತಿ

6 ಸಾವಿರ ಗ್ರಾ.ಪಂ.ಗಳಲ್ಲಿ ಸಂವಿಧಾನ ಜಾಗೃತಿ ಜಾಥಾ: ಸಿಎಂ ಸಿದ್ದರಾಮಯ್ಯ

ಸಂವಿಧಾನ ರಕ್ಷಣೆ ಎಂದರೆ ಅದು ಜನರ ರಕ್ಷಣೆ ಮಾಡಿದಂತೆ. ಆದ್ದರಿಂದ ಸಂವಿಧಾನ ರಕ್ಷಣೆಗೆ ಮುಂದಾಗಬೇಕಿದೆ. 75ನೇ ವರ್ಷದ ಸಂವಿಧಾನ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಜಾಗೃತಿ ಬಗೆಗೆ ರಾಜ್ಯಾದ್ಯಂತ ಗ್ರಾಮ ಪಂಚಾಯತಿ, ಹೋಬಳಿ ಕೇಂದ್ರ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜಾಥಾಕ್ಕೆ ಚಾಲನೆ ನೀಡುತಿದ್ದು, ಸಂವಿಧಾನ ತಜ್ಞರು, ವಿಚಾರವಾದಿಗಳಿಂದ ಭಾಷಣ ಕಾರ್ಯಗಳು ನಡೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ಗೃಹ ಕಚೇರಿಯಲ್ಲಿಂದು ನಡೆದ ಸಂವಿಧಾನ ಜಾಗೃತಿ ಜಾಥಾ ಹಿನ್ನೆಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶದ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನಕ್ಕೆ ಸಂವಿಧಾನ ವನ್ನು ಬಲಪಡಿಸಬೇಕಾಗಿದೆ. ರಾಜ್ಯದ 6 ಸಾವಿರ ಗ್ರಾ.ಪಂ.ಗಳಲ್ಲಿ ಸಂಚರಿಸುವ ಸಂವಿಧಾನ ಜಾಗೃತಿ ಜಾಥಾ ಸ್ಥಬ್ದ ಚಿತ್ರ ವಾಹನಗಳು ಬೆಂಗಳೂರಿನಲ್ಲಿ ಸಮಾವೇಶಗೊಂಡು ಜನವರಿ 24 ಹಾಗೂ 25 ರಂದು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಹಾಗೂ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ” ಎಂದರು.

“ಸಂವಿಧಾನದ ಮೂಲ ಅಂಶಗಳಾದ ಧರ್ಮನಿರಪೇಕ್ಷತೆ,ಜಾತ್ಯಾತೀತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಒದಗಿಸುವ ವಿಧಿಗಳು, ಮೂಲಭೂತ ಹಕ್ಕುಗಳು,ಕರ್ತವ್ಯಗಳು ಮತ್ತು ರಾಜ್ಯ ನಿರ್ದೇಶಕ ತತ್ವಗಳನ್ನು ಖಾತ್ರಿಪಡಿಸುವ ವಿಷಯಗಳ ಬಗೆಗೆ ಸಮ್ಮೇಳನದಲ್ಲಿ ಚರ್ಚೆಗಳು ನಡೆಯಲಿವೆ” ಎಂದು ತಿಳಿಸಿದರು.

“ಸಮಾವೇಶದಲ್ಲಿ ಸಂವಿಧಾನ ರಚನಾ ಸಭೆಯಲ್ಲಿ ನಡೆದ ಅರ್ಥಪೂರ್ಣ ಚರ್ಚೆಗಳ 10 ವಾಲ್ಯೂಮ್‌ ಗಳ ಪುಸ್ತಕಗಳು ಮುದ್ರಿತವಾಗಿದ್ದು ಪುಸ್ತಕಗಳ ಬಿಡುಗಡೆಯೂ ಇರಲಿದೆ. ಸಂವಿಧಾನದ ಅಂಗೀಕಾರದ ಮುನ್ನಾದಿನ ಅಂಬೇಡ್ಕರರು ಮಾಡಿದ ಅಮೋಘ ಭಾಷಣವನ್ನೂ ಪುಸ್ತಕ ಒಳಗೊಂಡಿರುವುದರೊಂದಿಗೆ ಡಾ.ಬಾಬು ರಾಜೇಂದ್ರ ಪ್ರಸಾದ್, ರಾಜಾಜಿ ಅಂತಹವರೂ ಸೇರಿದಂತೆ ಸಂವಿಧಾನ ರಚನಾ ಸಭೆಯ ಮುತ್ಸದ್ದಿಗಳ ಮಾತುಗಳು ಪುಸ್ತಕದಲ್ಲಿರಲಿವೆ” ಎಂದರು.

“ಸಂವಿಧಾನವನ್ನು ದುರ್ಬಲಗೊಳಿಸಲು ಪಟ್ಟಭದ್ರ ಹಿತಾಸಕ್ತಿಗಳು ಹವಣಿಸುತಿದ್ದು, ಸಂವಿಧಾನಕ್ಕೆ ವಿರುದ್ದವಾದ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅಂತಹವರಿಗೆ ಸಂವಿಧಾನ ಜಾಥಾ ಉತ್ತರ ಕೊಡಲಿದೆ” ಎಂದು ತಿಳಿಸಿದರು.

ಕೃಪೆ: ಈದಿನ.ಕಾಂ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!