Sunday, November 22, 2026

ಪ್ರಾಯೋಗಿಕ ಆವೃತ್ತಿ

ಲೋಕಸಭಾ ಚುನಾವಣೆ| ಚೆಕ್ ಪೋಸ್ಟ್ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

ಲೋಕಸಭಾ ಸಾರ್ವತ್ರಿಕ ಚುನಾವಣೆ- 2024 ರ ಚುನಾವಣಾ ವೇಳಪಟ್ಟಿ ಪ್ರಕಟವಾದ ತಕ್ಷಣ ಚೆಕ್ ಪೋಸ್ಟ್ ಗಳ ಕಾರ್ಯನಿರ್ವಹಣೆ ಪ್ರಾರಂಭವಾಗಬೇಕಿದ್ದು, ಚೆಕ್ ಪೋಸ್ಟ್ ನಿರ್ಮಾಣ ಕೆಲಸ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಪೂರ್ವಸಿದ್ಧತಾ ಸಭೆ ನಡೆಸಿ ಮಾತನಾಡಿದ ಅವರು, ಮದ್ದೂರು-4, ಮಳವಳ್ಳಿ-5, ಶ್ರೀರಂಗಪಟ್ಟಣ- 5, ನಾಗಮಂಗಲ -4 ಹಾಗೂ ಕೆ.ಆರ್.ಪೇಟೆ‌- 3 ಒಟ್ಟು 21 ಚೆಕ್ ಪೋಸ್ಟ್ ನಿರ್ಮಿಸಲು ಯೋಜಿಸಲಾಗಿದೆ ಎಂದರು.

ಚೆಕ್ ಪೋಸ್ಟ್ ಗಳು ವಾಹನ ಸಂಚಾರಕ್ಕೆ ಅಡೆ ತಡೆ ಉಂಟುಮಾಡದಂತೆ ನಿರ್ಮಾಣವಾಗಬೇಕು. ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯಾಗಬೇಕು. ಬಿಸಿಲು ಹೆಚ್ಚಿರುವುದರಿಂದ ಉತ್ತಮ ಫ್ಯಾನ್ ವ್ಯವಸ್ಥೆ ಮಾಡಿ ಎಂದರು.

ಚೆಕ್ ಪೋಸ್ಟ್‌ ಟೆಂಟ್ ಗಳ ಮೇಲೆ ಚೆಕ್ ಪೋಸ್ಟ್ ಹೆಸರು, ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮೊಬೈಲ್ ಸಂಖ್ಯೆ, ಆದಾಯ ತೆರಿಗೆ ಹಾಗೂ ವಾಣಿಜ್ಯ ತೆರಿಗೆ ನೋಡಲ್ ಅಧಿಕಾರಿಗಳ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಎಂದರು.

ಚೆಕ್ ಪೋಸ್ಟ್ ನಿರ್ಮಾಣ ಸಂದರ್ಭದಲ್ಲಿ ಆಯಾ ವ್ಯಾಪ್ತಿಯ ಸಹಾಯಕ ಚುನಾವಣಾಧಿಕಾರಿ, ಪೊಲೀಸ್ ಅಧಿಕಾರಿ, ಸಹಾಯಕ ಕಾರ್ಯಪಾಲಕ ಅಭಿಯಂತರರು ಒಟ್ಟಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವ್ಯವಸ್ಥಿತವಾಗಿ ಚೆಕ್ ಪೋಸ್ಟ್ ನಿರ್ಮಾಣವಾಗಬೇಕು ಎಂದರು.

ಚೆಕ್ ಪೋಸ್ಟ್ ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ, ವಿ‌.ಎಸ್.ಟಿ, ಎಸ್.ಎಸ್.ಟಿ ಯವರಿಗರ ಗುರುತಿನ ಚೀಟಿಗಳನ್ನು ಸಿದ್ಧಪಡಿಸಿ ನೀಡುವಂತೆ ತಿಳಿಸಿದರು.

ಅಬಕಾರಿ ಇಲಾಖೆ ಅವರು ಅಬಕಾರಿ ಸನ್ನದ್ದುಗಳಲ್ಲಿ ಇರುವ ಸ್ಟಾಕ್ ಗಳನ್ನು ಪರಿಶೀಲಿಸಬೇಕು. ಕಳೆದ ಮೂರು ತಿಂಗಳಲ್ಲಿ‌ ಸ್ಟಾಕ್ ನಲ್ಲಿ ಏರಿಳಿತ ವಾಗಿದ್ದಲ್ಲಿ ವರದಿ ಸಿದ್ಧಪಡಿಸಿಕೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್ ನಾಗರಾಜು, ಅಬಕಾರಿ ಇಲಾಖೆ ಅಧಿಕಾರಿ ರವಿ ಶಂಕರ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಹರ್ಷ, ಚುನಾವಣಾ ತಹಶೀಲ್ದಾರ್ ವೆಂಕಟಾಚಲಪತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ