ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ 75 ಕೆರೆ ನಿರ್ಮಾಣ ಮಾಡುವ ಮಾನ್ಯ ಪ್ರಧಾನ ಮಂತ್ರಿಗಳ ಆದೇಶದಂತೆ ಮಳವಳ್ಳಿ ತಾಲ್ಲೂಕಿನ ಬಂಡೂರು ಗ್ರಾಮದಲ್ಲಿ ಒಂದು ಎಕರೆ ಬುಂಡಕಟ್ಟೆ ಪ್ರದೇಶದಲ್ಲಿ ಜಿಲ್ಲೆಯ ಮೊದಲ ಅಮೃತ ಸರೋವರ ಕೆರೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಕೇಂದ್ರ ತಂಡ ಸಹಾಯಕ ಕಾರ್ಯದರ್ಶಿ ಸುಬ್ರಹ್ಮಣ್ಯ ಶರ್ಮಾ ತಿಳಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರವು ಜಲಶಕ್ತಿ ಅಭಿಯಾನದ ಅಡಿಯಲ್ಲಿ ಅಮೃತ ಸರೋವರ ಅಭಿಯಾನದ ಮೂಲಕ ಜಿಲ್ಲೆಯಲ್ಲಿ 2022-23 ನೇ ಸಾಲಿನ ಅಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ 75 ಅಮೃತ ಸರೋವರ ಕಾಮಗಾರಿ ಆಯ್ಕೆ ಮಾಡಿದ್ದು ಅದರಂತೆಯೇ ಜಿಲ್ಲೆಯಲ್ಲಿ ಒಟ್ಟು 101 ಅಮೃತ ಸರೋವರ ಕಾಮಗಾರಿಗಳನ್ನು ಆಯ್ಕೆ ಮಾಡಿದ್ದು, ಮೊದಲನೇ ಹಂತದಲ್ಲಿ 21 ಕಾಮಗಾರಿಗಳು ಪ್ರಗತಿಯಲ್ಲಿದ್ದು, ಇನ್ನೂ ಉಳಿದ 54 ಕಾಮಗಾರಿಗಳನ್ನು 2023 ರ ಆಗಸ್ಟ್ ಅಂತ್ಯಕ್ಕೆ ಪೂರ್ಣಗೊಳಿಸಲಾಗುತ್ತದೆ ಎಂದರು.
ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪಡಿಸುತ್ತಿರುವ 75 ಅಮೃತ ಸರೋವರಗಳ ಪೈಕಿ ಮೊದಲನೆಯ ಅಮೃತ ಸರೋವರಕ್ಕೆ ಕೇಂದ್ರ ತಂಡವು ಕಾರ್ಯ ಚಟುವಟಿಕೆಯಡಿ ನೂತನ ಕೆರೆ ನಿರ್ಮಾಣದಲ್ಲಿ ತೊಡಗಿರುವ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರ ಅನುಭವ ಹಂಚಿಕೊಂಡರು.
ಹಾಗೇಯೆ ಅನುಷ್ಠಾನ ಇಲಾಖೆಗಳಾದ ಅರಣ್ಯ ಇಲಾಖೆಯ ರಸ್ತೆ ಬದಿಯ ನೆಡು ತೋಪು, ತೋಟಗಾರಿಕೆ ಇಲಾಖೆಯ ನರ್ಸರಿ ಪ್ಲಾಂಟೆಶನ್ ಮತ್ತು ಅಂತರ್ಜಲ ಚೇತನ ಕಾಮಗಾರಿಗಳನ್ನು ವೀಕ್ಷಿಸಿದರು.
ಇದೇ ಸಂದರ್ಭದಲ್ಲಿ ಕೇಂದ್ರ ಸಚಿವಾಲಯದ ಆರ್ಥಿಕ ಇಲಾಖೆ ಉಪ ಕಾರ್ಯದರ್ಶಿಗಳಾದ ಸುರ್ಜಿತ್ ಕಾರ್ತಿಕೇಯನ್,ಸಿಡಬ್ಲ್ಯೂ.ಪಿ.ಸಿ.ಆರ್ ವಿಜ್ಞಾನಿಗಳಾದ ನಿಶ್ಚಯ್ ಮಲ್ಹೋತ್ರಾ,ಸಹಾಯಕ ನಿರ್ದೇಶಕರಾದ ಮಂಜುನಾಥ್, ಪಿಡಿಓ ಕುಮಾರ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್, ಪುಷ್ಪ ಲತಾ, ಅರಣ್ಯ ಇಲಾಖೆಯ ಸಿಬ್ಬಂದಿಗಳು,ಗ್ರಾಮ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.