Friday, September 20, 2024

ಪ್ರಾಯೋಗಿಕ ಆವೃತ್ತಿ

ಕಾವೇರಿ ಹೋರಟ| ಧರಣಿ- ಸರದಿ ಉಪವಾಸ ಸತ್ಯಾಗ್ರಹ ಮುಂದುವರಿಕೆ

ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ಮಾಡಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಹಾಗೂ ಕೃಷ್ಣರಾಜಸಾಗರ ಜಲಾಶಯದಿಂದ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯು ಮಂಡ್ಯದಲ್ಲಿ ನಡೆಸುತ್ತಿರುವ ಹೋರಾಟವು ಮುಂದುವರಿದಿದ್ದು, ಇಂದಿನ ಸರದಿ ಉಪವಾಸದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಸದಸ್ಯರು ಭಾಗಿಯಾಗಿ ಕಾವೇರಿ ಹೋರಾಟ ಬೆಂಬಲಿಸಿದರು.

ಮಂಡ್ಯನಗರದ ಸರ್ ಎಂ ವಿ ಪ್ರತಿಮೆ ಎದುರು ಸರದಿ ಉಪವಾಸದಲ್ಲಿ ವೈಜ್ಞಾನಿಕ ಸಂಶೋಧನಾ ಪರಿಷತ್ ನ ಚಿಕ್ಕರಸಿನಕೆರೆ ಸಿ.ಶಿವಲಿಂಗಯ್ಯ, ಕೊಮ್ಮೆರಹಳ್ಳಿ ನರಸಿಂಹಮೂರ್ತಿ, ಮಂಡ್ಯದ ಶ್ರೀರಾಮನಗರದ ವೆಂಕಟಚಲಯ್ಯ, ಸಿದ್ದಾರ್ಥ ಬಡಾವಣೆಯ ಜಯರಾಮು, ಆಲಕೆರೆ ಗ್ರಾಮದ ಸತ್ಯಾನಂದ ಸ್ವಾಮಿ ಭಾಗಿಯಾದರು.

ನಿರಂತರ ಹೋರಾಟ ಮಾಡುತ್ತಿದ್ದರೂ ನೆರೆರಾಜ್ಯಕ್ಕೆ ನೀರು ಹರಿಸುತ್ತಾ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದು, ರೈತರ ಹಿತವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಬೆಳಗಾವಿ ಅಧಿವೇಶನದಲ್ಲಿ ಕಾವೇರಿ ಬಗ್ಗೆ ಸಮಗ್ರವಾಗಿ ಚರ್ಚಿಸಿ ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ರಾಷ್ಟ್ರೀಯ ಜಲ ನೀತಿ ರೂಪಿಸುವ ಮೂಲಕ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ದೊರಕಿಸಿಕೊಡಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಬೋರಯ್ಯ, ಸಂಘಟನಾ ಕಾರ್ಯದರ್ಶಿ ಸುನಂದ ಜಯರಾಂ, ರೈತ ಸಂಘದ ಇಂಡವಾಳು ಚಂದ್ರಶೇಖರ್, ಮುದ್ದೆ ಗೌಡ, ದಸಂಸ ಎಂ.ವಿ.ಕೃಷ್ಣ, ತಗ್ಗಳ್ಳಿ ವೆಂಕಟೇಶ, ಜಯ ಕರ್ನಾಟಕ ಪರಿಷತ್ ನಾರಾಯಣ್, ವೈಜ್ಞಾನಿಕ ಪರಿಷತ್ ಶಿವಲಿಂಗಯ್ಯ, ಪ್ರಗತಿಪರ ಚಿಂತನ ಎಂ.ವಿ.ಕೃಷ್ಣ ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!