Friday, November 20, 2026

ಪ್ರಾಯೋಗಿಕ ಆವೃತ್ತಿ

ಸಂಘದ ಬೆಳವಣಿಗೆಗೆ ಸಹಕರಿಸಿ-ರಾಜೇಶ್

ರೈತರ ಶ್ರೇಯೋಭಿವೃದ್ಧಿಗೆ ಸಹಕಾರ ನೀಡುವ ಸಹಕಾರ ತತ್ವ ಬೆಳೆಸುವ ಮೂಲಕ ಸಂಘದ ಬೆಳವಣಿಗೆಗೆ ಸಹಕರಿಸಬೇಕೆಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎನ್.ಜೆ.ರಾಜೇಶ್ ಹೇಳಿದರು.

ನಾಗಮಂಗಲ ತಾಲ್ಲೂಕಿನ ದೇವಲಾಪುರ ಗ್ರಾಮದ ವೀರಾಂಜನೇಯ ಸ್ವಾಮಿ ದೇವಾಲಯ ಆವರಣದಲ್ಲಿ ನಡೆದ ದೇವಲಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2021-22ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು

ಅತಿ ಹೆಚ್ಚು ವ್ಯವಹಾರಗಳನ್ನು ಮಾಡಬೇಕು, ಆಗ ಮಾತ್ರ ಸಹಕಾರ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಲ್ಲಿ ಹೆಚ್ಚಾಗಿ ಮಹಿಳಾ ಸ್ವಸಹಾಯ ಸಂಘಗಳನ್ನು ಹೊಂದಬೇಕು ಎಂದರು

ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ಆಯವ್ಯಯವನ್ನು ಮಂಡಿಸಿದ್ದು ಪ್ರಗತಿಪರ ರೈತರು ಹಾಗೂ  ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದವರನ್ನು ಗುರುತಿಸಿ ಸನ್ಮಾನಿಸಲಾಯಿತು

ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ಯಶೋದಮ್ಮ, ನಿರ್ದೇಶಕರಾದ ಡಿ.ಕೆ. ಸುರೇಶ್, ಬಚ್ಚೇಗೌಡ, ಈಶ್ವರಯ್ಯ, ಜಯರಾಮ, ನರಸಿಂಹಮೂರ್ತಿ, ಬೆಟ್ಟೇಗೌಡ, ರಮೇಶ್ ಗೋವಿಂದರಾಜು ಹಾಗೂ ರಾಮಪ್ಪ ಉಪಸಿತರಿದ್ದರು.

ಹಿರಿಯ ಸಹಕಾರಿ ಕೋದಂಡರಾಮ, ರಾಮೇಗೌಡ, ಶಂಕರೇಗೌಡ  ಹಾಜರಿದ್ದರು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಡಿ. ವಿ ನಾಗರಾಜ್ ಸ್ವಾಗತಿಸಿ ವಂದಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ